ಮಂಗಳೂರು: ರಾಷ್ಟ್ರಮಟ್ಟದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ನಡೆಯಲಿರುವ ಅಭಿಯಾನದ ಅಂಗವಾಗಿ ಏ.27ರಂದು ರಾಜ್ಯದ ಎಲ್ಲ ತಾಲ್ಲೂಕುಗಳಲ್ಲಿ ಸಹಿ ಸಂಗ್ರಹ ಕಾರ್ಯ ನಡೆಯಲಿದೆ ಎಂದು ಗೋರಕ್ಷಣಾ ಅಭಿಯಾನದ ದಕ್ಷಿಣ ಕನ್ನಡ ಮತ್ತು ಉಡುಪಿ ಸಂಯೋಜಕ ಸಾಯಿ ಈಶ್ವರ್ ಗುರೂಜಿ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೂರು ಹಂತಗಳಲ್ಲಿ ನಡೆಯುವ ಅಭಿಯಾನದ ಆರಂಭ ಇದಾಗಿದ್ದು ನ್ಯಾಯ ಸಿಗದೇ ಇದ್ದರೆ 108 ಸಾಧುಗಳು ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ ಎಂದರು.

27ರಂದು 11 ಗಂಟೆಗೆ ಎಲ್ಲ ತಾಲ್ಲೂಕು ಕಚೇರಿಗಳ ಬಳಿ ಸಹಿ ಸಂಗ್ರಹ ಮಾಡಲಾಗುವುದು. ಗ್ರಾಮ ಮಟ್ಟದಿಂದ ರಾಜಧಾನಿಯ ವರೆಗೆ ಪ್ರಚಾರ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ವಿವರಿಸಿದರು.

ಮಧುಸೂದನ್ ನಾಯಕ್, ಧನ್ರಾಜ್ ಶೆಟ್ಟಿ ಮತ್ತು ಮಧುಸೂದನ್ ಉರ್ವಸ್ಟೋರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-29-701583188

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.