ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಂಗಳೂರು ಯೋಜನಾ ಕಚೇರಿಯಲ್ಲಿ ಸಿ.ಎಸ್.ಸಿ ಸೇವಾದಾರರ ಕಾರ್ಯಾಗಾರ ನಡೆಯಿತು.

ಕೇಂದ್ರ ಕಚೇರಿಯ ಸಿ.ಎಸ್.ಸಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಜಯಂತ್ ಪೂಜಾರಿ ಉದ್ಘಾಟಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿ.ಎಸ್.ಸಿ ಕೇಂದ್ರದ ಮೂಲಕ ಸರ್ಕಾರದ ಆನೇಕ ಯೋಜನೆ ಮತ್ತು ಕಾರ್ಯಕ್ರಮಗಳನ್ನು ನೇರವಾಗಿ ಪಾರದರ್ಶಕ ವ್ಯವಸ್ಥೆಯಲ್ಲಿ ಜನಸಾಮಾನ್ಯರಿಗೆ ಒದಗಿಸಲಾಗುತ್ತಿದೆ. ಇದರ ಜೊತೆಗೆ ಸೇವಾಕೇಂದ್ರಗಳಲ್ಲಿ ಡಿಜಿಪೇ ಅನುಷ್ಠಾನ ಮಾಡಿದ್ದು, ಗ್ರಾಹಕರು ಎಟಿಎಂ ಕಾರ್ಡ್ ಬಳಸಿ ನಗದು ಪಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದರು.

ಕೇಂದ್ರ ಸರ್ಕಾರದ ಐಟಿ ಸಚಿವಾಲಯದಿಂದ ಸಿ.ಎಸ್.ಸಿ ಇ– ಗವರ್ನೆನ್ಸ್ ಮೂಲಕ 3 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸಿಎಸ್ಸಿ ಒಲಂಪಿಯಾಡ್ ಪರೀಕ್ಷೆ ನಡೆಸಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಂಗಳೂರು ಸಿ.ಎಸ್.ಸಿ ಕೇಂದ್ರದಲ್ಲಿ 2025-26ನೇ ಸಾಲಿನಲ್ಲಿ ಒಲಂಪಿಯಾಡ್ ನೋಂದಣಿ ಮಾಡಿಕೊಂಡು ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಪ್ರಸಕ್ತ ವರ್ಷದ ಒಲಂಪಿಯಾಡ್ ನೋಂದಾವಣೆ ಪ್ರಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಡಿ, ತಾಲ್ಲೂಕು ಯೋಜನಾಧಿಕಾರಿ ಚಂದ್ರಶೇಖರ್ ಎಸ್, ಎಂ.ಐ.ಎಸ್. ಯೋಜನಾಧಿಕಾರಿಗಳಾದ ಪ್ರೇಮನಾಥ್, ಗೋಪಾಲ್ ಆಚಾರ್ಯ, ಸಿ.ಎಸ್.ಸಿ ನೋಡಲ್ ಅಧಿಕಾರಿ ಪ್ರಶಾಂತ್ ಪೂರ್ಜೆ, ಕೃಷ್ಣ ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-412437901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.