ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೆಂಬರ್ 27 ರಿಂದ ಪಾವಂಜೆ ಮೇಳದ ಪ್ರದರ್ಶನ: ಪಟ್ಲ ಸತೀಶ್ ಶೆಟ್ಟಿ ಸಾರಥ್ಯ

Last Updated 17 ಅಕ್ಟೋಬರ್ 2020, 8:08 IST
ಅಕ್ಷರ ಗಾತ್ರ

ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಮೇರು ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಪ್ರಧಾನ ಕಲಾವಿದರಾಗಿರುವ ಪಾವಂಜೆ ಮೇಳದ ಪ್ರದರ್ಶನ ನವೆಂಬರ್ 27 ರಿಂದ ಆರಂಭವಾಗಲಿದೆ.

ಈ ಕುರಿತು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಟ್ಲ ಸತೀಶ್ ಶೆಟ್ಟಿ, ನವೆಂಬರ್ 27ರಿಂದ ಪಾವಂಜೆ ಜ್ಞಾನಶಕ್ತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರದರ್ಶನ ಆರಂಭವಾಗಲಿದೆ ಎಂದರು.

ಪಾವಂಜೆ ದೇವಳದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್ ನೂತನ ಮೇಳದ ಬಗ್ಗೆ ಮಾಹಿತಿ ನೀಡಿ, ಮೇಳದ ಯಕ್ಷಗಾನ ಪ್ರದರ್ಶನವು ಕಾಲಮಿತಿಯದ್ದಾಗಿದ್ದು, ಸಾಮಾನ್ಯವಾಗಿ ಸಂಜೆ 6 ಗಂಟೆಯಿಂದ 11ರವರೆಗಿನ ಅವಧಿಯಲ್ಲಿ ನಡೆಯಲಿದೆ. ಈ ಎಲ್ಲಾ ಪ್ರದರ್ಶನಗಳನ್ನು ಕೋವಿಡ್-19ರ ಪರಿಸ್ಥಿತಿಯಲ್ಲಿ ಸರ್ಕಾರ ನೀಡುವ ನಿರ್ದೇಶನಗಳಿಗೆ ಒಳಪಟ್ಟು ನಡೆಸಲಾಗುವುದು ಎಂದು ತಿಳಿಸಿದರು.

ಪಾವಂಜೆ ಜ್ಞಾನಶಕ್ತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಪಟ್ಲ ಸತೀಶ್ ಶೆಟ್ಟಿ ಅವರು ಪ್ರಧಾನ ಭಾಗವತರಾಗಿದ್ದು, ಪ್ರಫುಲ್ಲಚಂದ್ರ ನೆಲ್ಯಾಡಿ ಭಾಗವತಿಕೆಯಲ್ಲಿ ಸಾಥ್ ನೀಡಲಿದ್ದಾರೆ. ಹಿಮ್ಮೇಳದಲ್ಲಿ ಪದ್ಮನಾಭ ಉಪಾಧ್ಯಾಯ, ಗುರುಪ್ರಸಾದ್ ಬೊಳ್ಳಿಂಜಡ್ಕ, ಪ್ರಶಾಂತ್ ವಗೆನಾಡು, ಪೂರ್ಣೇಶ್ ಆಚಾರ್ಯ ಇರಲಿದ್ದಾರೆ.

ಹಾಸ್ಯ ಪಾತ್ರಧಾರಿಗಳಾಗಿ ಉಜಿರೆ ನಾರಾಯಣ, ಸಂದೇಶ್ ಮಂದಾರ, ಸ್ತ್ರೀ ಪಾತ್ರಧಾರಿಗಳಾಗಿ ಅಕ್ಷಯ್ ಕುಮಾರ್, ರಾಜೇಶ್ ನಿಟ್ಟೆ, ಯೋಗೀಶ್ ಕಡಬ, ವಿಶ್ವಾಸ್ ಕಾವೂರು ಇರಲಿದ್ದಾರೆ.

ಪ್ರಧಾನ ಪಾತ್ರದಲ್ಲಿ ರಾಧಾಕೃಷ್ಣ ನಾವಡ, ದಿವಾಣ ಶಿವಶಂಕರ ಭಟ್, ಸಂತೋಷ್ ಮಾನ್ಯ, ರಾಕೇಶ್ ರೈ, ಸತೀಶ್ ನೈನಾಡು, ಮಾಧವ ಕೊಳ್ತಮಜಲು, ಮೋಹನ್ ಬೆಳ್ಳಿಪ್ಪಾಡಿ, ಮನೀಷ್ ಪಾಟಾಳಿ, ಲೋಕೇಶ ಮುಚ್ಚೂರು, ಹರಿರಾಜ್ ಕಿನ್ನಿಗೋಳಿ, ರೋಹಿತ್, ದಿವಾಕರ, ಲಕ್ಷಣ, ಮಧುರಾಜ್, ಭುವನ್ ಮತ್ತಿತರರು ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT