ಮಂಗಳೂರು: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘದ (ದ.ಕ. ಮತ್ತು ಉಡುಪಿ ಜಿಲ್ಲೆ) ಮಾಸಿಕ ಸಭೆ ಈಚೆಗೆ ನಗರದ ಕಡೆಮುಗರುನಲ್ಲಿರುವ ಸಂಘದ ಸಭಾಭವನದಲ್ಲಿ ನಡೆಯಿತು.

ಸಂಘದ ಚೇರ್ಮನ್ ಜನಾರ್ದನ ಅತ್ತಾವರ ಮಾತನಾಡಿ, ‘ಮೇ 3ರಂದು ಸಂಘ ಮತ್ತು ನಗರದ ಎಂ.ಜಿ. ಕ್ಲಬ್ ಸಹಯೋಗದಲ್ಲಿ ಎಕ್ಕೂರಿನ ಫಿಷರಿಸ್ ಮೈದಾನದಲ್ಲಿ ವೃತ್ತಿ ಬಾಂಧವರಿಗಾಗಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದರು.

ಸಂಘದ ಬಂಟ್ವಾಳ ವಲಯದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಸುಳ್ಯ ವಲಯದಲ್ಲಿ ಬೆಂಕಿ ಅವಘಡಕ್ಕೆ ಈಡಾದ ಎರಡು ಗ್ಯಾರೇಜುಗಳ ಮಾಲಕರಿಗೆ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದ ಕಡಬ ವಲಯದ ಸದಸ್ಯರೋಬ್ಬರಿಗೆ ಸಂಘದ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.

ಸಂಘದ ಅಧ್ಯಕ್ಷ ದಿನಕರ ಕುಲಾಲ್, ನಿರ್ದೇಶಕ ಪುಂಡಲೀಕ ಸುವರ್ಣ, ಉಪಾಧ್ಯಕ್ಷ ಅಬ್ದುಲ್ ಮೊಯ್ದಿನ್ ಕಾರ್ಕಳ ಮತ್ತು ಕೋಶಾಧಿಕಾರಿ ಕಿರಣ್ ರಾಜ್ ವೇದಿಕೆಯಲ್ಲಿದ್ದರು.

ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಅವರು ಕ್ರೀಡಾಕೂಟದ ಮಾಹಿತಿ ನೀಡಿದರು.

ಪ್ರಧಾನ ಕಾರ್ಯದರ್ಶಿ ರಾಜ ಗೋಪಾಲ್ ನಿರೂಪಿಸಿದರು. ಸಲಹೆಗಾರ ಕೃಷ್ಣ ಶ್ರೀಯಾನ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-29-1035683634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.