ಶುಕ್ರವಾರ, ಅಕ್ಟೋಬರ್ 30, 2020
24 °C

ಮಂಗಳೂರು: ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ(ಮಂಗಳೂರು): ಹಿರಿಯ ವಿದ್ವಾಂಸ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿ, ನರಿಂಗಾನ ಗ್ರಾಮದ ಪೂಡಲ್ ನ ಅಲ್ಹಾಜ್ ಪಿ.ಎಂ. ಇಬ್ರಾಹಿಂ ಮುಸ್ಲಿಯಾರ್ ಬೇಕಲ್ (71) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ಅವರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ ಅವರು, ಜಾಮಿಯಾ ಸಅದಿಯಾ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರು, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ ಅಲ್ ಅನ್ಸಾರ್ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ದೇವಬಂದ್ ಅರಬಿಕ್ ಕಾಲೇಜಿನಿಂದ ಪದವಿ ಪಡೆದಿದ್ದ ಅವರು, ಸೂರಿಂಜೆ ಮತ್ತು ಬಂಟ್ವಾಳದ ಮಸೀದಿಗಳಲ್ಲಿ ತಲಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಸುದೀರ್ಘ 43 ವರ್ಷಗಳಿಂದ ಬೇಕಲದಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸುವ ಮೂಲಕ ‘ಬೇಕಲ್ ಉಸ್ತಾದ್’ ಎಂದೇ ಜನಪ್ರಿಯರಾಗಿದ್ದರು.

ಬಂಟ್ವಾಳ ತಾಲ್ಲೂಕಿನ ನರಿಂಗಾನ ಗ್ರಾಮದ ಫೂಡಲ್ ಎಂಬಲ್ಲಿನ ಮುಹಮ್ಮದ್ ಮತ್ತು ಖದೀಜಾ ದಂಪತಿಯ ಪುತ್ರನಾಗಿ 1949ರಲ್ಲಿ ಜನಿಸಿದ್ದ ಅವರು ನರಿಂಗಾನ ಗ್ರಾಮದ ಡಿಜಿ ಕಟ್ಟೆಯ ಶಾಲೆಯಲ್ಲಿ 7ನೆ ತರಗತಿ ಕಲಿತ ಬಳಿಕ ಧಾರ್ಮಿಕ ವಿದ್ಯಾಭ್ಯಾಸ ಕಲಿಯಲು ಆಸಕ್ತಿ ವಹಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆಗೆ ‘ತಾಜುಲ್ ಫುಖಹಾಅ್’ ಎಂಬ ಬಿರುದು ಪಡೆದಿದ್ದಾರೆ.

ಅವರು ಕರ್ಮಶಾಸ್ತ್ರ, ಖಗೋಳಶಾಸ್ತ್ರದ ಬಗ್ಗೆ ಉನ್ನತ ಜ್ಞಾನ ಹೊಂದಿದ್ದರು. ಸುನ್ನಿ ಜಂ ಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದರು. ಜಾಮಿಯಾ ಸಅದಿಯಾ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರಾಗಿದ್ದರು. ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರದ ಸದಸ್ಯರಾಗಿದ್ದರು. ಸೂರಿಂಜೆ ಮತ್ತು ಬಂಟ್ವಾಳದ ಜುಮಾ ಮಸೀದಿಯಲ್ಲಿ ತಲಾ ಎರಡು ವರ್ಷ ಮುದರ್ರಿಸ್ ಆಗಿ ಸೇವೆ ಸಲ್ಲಿಸಿದ್ದಾರೆ. ಸತತ 43 ವರ್ಷಗಳಿಂದ ಬೇಕಲದಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸುವ ಮೂಲಕ ಬೇಕಲ್ ಉಸ್ತಾದ್ ಎಂದೇ ಜನಪ್ರಿಯರಾಗಿದ್ದಾರೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು