ಶುಕ್ರವಾರ, ಜನವರಿ 28, 2022
24 °C
ಸಹಕಾರ ಸಚಿವರ ಎಚ್ಚರಿಕೆಯ ಬೆನ್ನಲ್ಲೆ ನಿರ್ಧಾರ

ದಕ್ಷಿಣ ಕನ್ನಡ: ಕಣದಿಂದ ಹಿಂದೆ ಸರಿದ ಎಂಎನ್ಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ವಿಧಾನ ಪರಿಷತ್‌ ಚುನಾವಣೆಗೆ
ಸ್ಪರ್ಧಿಸುವುದಾಗಿ ಹೇಳುವ ಮೂಲಕ ಕುತೂಹಲ ಸೃಷ್ಟಿಸಿದ್ದ ದಕ್ಷಿಣ ಕನ್ನಡ ಕೇಂದ್ರ ಸಹಕಾರ ಬ್ಯಾಂಕ್‌ (ಎಸ್‌ಸಿಡಿಸಿಸಿ) ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್, ಇದೀಗ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.

‘ರಾಜಕೀಯ ಪ್ರವೇಶದಿಂದ ಸಹಕಾರಿಗಳಿಂದ ದೂರ ಉಳಿಯುವ ಸಾಧ್ಯತೆ ಇದೆ. ನಾನು ಸಹಕಾರಿ ನಾಯಕನಾಗಿಯೇ ಇರಬೇಕು. ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ. ಸಹಕಾರ ಕ್ಷೇತ್ರದಿಂದಲೇ ಗುರುತಿಸಿಕೊಳ್ಳಬೇಕು. ಸಹಕಾರ ಕ್ಷೇತ್ರಕ್ಕೆ ನನ್ನಿಂದಾಗುವ ಉತ್ತಮ ಕೆಲಸ ಮುಂದುವರಿಸುವ ಉದ್ದೇಶವಿದೆ. ಹಾಗಾಗಿ ಸಹಕಾರಿಗಳ ಆಶಯಕ್ಕೆ ಸ್ಪಂದಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ’ ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು