ಮಂಗಳೂರು: ಬದಲಾದ ಉದ್ಯೋಗ ಕ್ಷೇತ್ರದ ಬೇಡಿಕೆಗನುಗುಣವಾಗಿ ವಿದ್ಯಾರ್ಥಿಗಳು ಹೊಸ ಕೋರ್ಸ್ಗಳತ್ತ ಆಕರ್ಷಿತರಾಗುತ್ತಿದ್ದು, ಸರ್ಕಾರಿ ಪದವಿ ಕಾಲೇಜುಗಳು ಅಸ್ತಿತ್ವದ ಉಳಿವಿಗಾಗಿ ಸಾಂಪ್ರದಾಯಿಕ ಕೋರ್ಸ್ಗಳ ಜೊತೆಗೆ ಸ್ಪರ್ಧಾತ್ಮಕ ಕೋರ್ಸ್ಗಳನ್ನು ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

ದ್ವಿತೀಯ ಪಿಯುಸಿ ವಿಜ್ಞಾನ ವಿಷಯ ಅಭ್ಯಾಸ ಮಾಡಿರುವವರಲ್ಲಿ ಹೆಚ್ಚಿನವರು ವೃತ್ತಿಪರ ಕೋರ್ಸ್ಗಳತ್ತ ದೃಷ್ಟಿ ನೆಟ್ಟಿರುತ್ತಾರೆ. ಇನ್ನುಳಿದ ವಿದ್ಯಾರ್ಥಿಗಳು ಹಾಗೂ ಕಲೆ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಪಿಯುಸಿ ಪೂರೈಸಿರುವವರು ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಾರೆ ಎಂಬ ಭರವಸೆಯಲ್ಲಿದ್ದ ಕಾಲೇಜುಗಳು ಈ ಬಾರಿ ಕೊಂಚ ಗಲಿಬಿಲಿಗೊಂಡಿವೆ. ಪ್ರವೇಶಕ್ಕೆ ತೀವ್ರ ಪೈಪೋಟಿ ಇರುವ ಸರ್ಕಾರಿ ಕಾಲೇಜುಗಳಲ್ಲೂ ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಪದವಿ ತರಗತಿಗಳಿಗೆ ಪ್ರವೇಶ ಅರ್ಜಿಗಳು ಬರುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

‘ಸರ್ಕಾರಿ ಪದವಿ ಕಾಲೇಜುಗಳಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಕುಸಿಯತೊಡಗಿದೆ. ದಶಕಗಳ ಹಿಂದೆ ಇರುವ ಕಾಂಬಿನೇಷನ್ಗಳು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸುತ್ತಿಲ್ಲ. ಸ್ವಾಯತ್ತ ಕಾಲೇಜುಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು ಹೊಸ ಕೋರ್ಸ್ಗಳನ್ನು ಪರಿಚಯಿಸಿ, ಉದ್ಯೋಗದ ಆಮಿಷ ಮುಂದಿಟ್ಟು, ವಿದ್ಯಾರ್ಥಿಗಳನ್ನು ಸೆಳೆಯುತ್ತಿವೆ. ಇತ್ತೀಚೆಗೆ ಹೆಚ್ಚು ಟ್ರೆಂಡಿಂಗ್ನಲ್ಲಿರುವ ಲಾಜಿಸ್ಟಿಕ್ಸ್, ಎವಿಯೇಷನ್ನಂತಹ ಡಿಪ್ಲೊಮಾ, ಎಐ ಕೋರ್ಸ್ಗಳು, ಪ್ಯಾರಾ ಮೆಡಿಕಲ್ ಕೋರ್ಸ್ಗಳತ್ತ ವಿದ್ಯಾರ್ಥಿಗಳು ಆಕರ್ಷಿತರಾಗುತ್ತಿದ್ದಾರೆ’ ಎನ್ನುತ್ತಾರೆ ಪದವಿ ಕಾಲೇಜಿನ ಪ್ರಾಂಶುಪಾಲರೊಬ್ಬರು.

‘ಸರ್ಕಾರಿ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಸಂಖ್ಯೆ ಇಳಿಕೆಯಾಗುತ್ತಿದೆ. ಸಕಾಲದಲ್ಲಿ ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುವುದಿಲ್ಲ. ಕಾಲೇಜು ಪ್ರಾರಂಭವಾಗಿ 2–3 ತಿಂಗಳುಗಳ ನಂತರ ಅತಿಥಿ ಉಪನ್ಯಾಸಕರ ನೇಮಕಾತಿ ಆಗುತ್ತದೆ. ಇದನ್ನೆಲ್ಲ ಗಮನಿಸುವ ಪಾಲಕರು, ಖಾಸಗಿ ಕಾಲೇಜುಗಳಿಗೆ ಮಕ್ಕಳನ್ನು ಸೇರಿಸಲು ಒಲವು ತೋರುತ್ತಾರೆ’ ಎಂದು ಅವರು ಬೇಸರಿಸಿದರು.

ಇನ್ನೂ ಕಾಲಾವಕಾಶ ಇದೆ: ‘ಜೂನ್ವರೆಗೂ ಪ್ರವೇಶಕ್ಕೆ ಅವಕಾಶ ಇದ್ದು, ದ್ವಿತೀಯ ಪಿಯುಸಿ–2 ಫಲಿತಾಂಶ ಬಂದ ಮೇಲೆ ವಿದ್ಯಾರ್ಥಿಗಳ ನೋಂದಣಿ ಹೆಚ್ಚಾಗುತ್ತದೆ. ನಮ್ಮ ಕಾಲೇಜಿಗೆ ಕೇರಳ ಭಾಗದಿಂದಲೂ ವಿದ್ಯಾರ್ಥಿಗಳು ಬರುತ್ತಾರೆ. ಅಲ್ಲಿ ಫಲಿತಾಂಶ ಪ್ರಕಟಗೊಂಡ ನಂತರ ವಿದ್ಯಾರ್ಥಿಗಳು ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಮಹಿಳಾ ಕಾಲೇಜು ಆಗಿರುವುದರಿಂದ ಈವರೆಗೆ ಯಾವ ಕೋರ್ಸ್ಗಳಿಗೂ ವಿದ್ಯಾರ್ಥಿಗಳ ಕೊರತೆಯಾಗಿಲ್ಲ’ ಎನ್ನುತ್ತಾರೆ ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಕೆ.

‘ನಮ್ಮ ಕಾಲೇಜಿಗೆ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಜೂನ್ವರೆಗೂ ಪದವಿ ಪ್ರವೇಶಕ್ಕೆ ಅವಕಾಶ ಇದ್ದು, ಈ ಭಾಗದ ವಿದ್ಯಾರ್ಥಿಗಳು ಮೇ ತಿಂಗಳ ಕೊನೆಯೊಳಗಾಗಿ ಬರಬಹುದು. ಪ್ರವೇಶ ಬಯಸಿ ಬರುವ ಎಲ್ಲರಿಗೂ ಅವಕಾಶ ಇದೆ’ ಎನ್ನುತ್ತಾರೆ ಡಾ. ಪಿ. ದಯಾನಂದ ಪೈ– ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಯಕರ ಭಂಡಾರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.