ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು | ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ: ಸುನೀಲ್ ಕುಮಾರ್

Published 23 ಮಾರ್ಚ್ 2024, 16:09 IST
Last Updated 23 ಮಾರ್ಚ್ 2024, 16:09 IST
ಅಕ್ಷರ ಗಾತ್ರ

ಮಂಗಳೂರು: ₹25 ಲಕ್ಷ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ.

ಮುಡಾ ಆಯುಕ್ತ ಮನ್ಸೂರ್ ಅಲಿ ಹಾಡ ಹಗಲೇ ಇಷ್ಟೊಂದು ಪ್ರಮಾಣದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದರೆ ಅವರಿಗೆ ಸರ್ಕಾರದ ಕೃಪಾಶೀರ್ವಾದ ಇರುವುದು ಸ್ಪಷ್ಟವಾಗುತ್ತದೆ. ಇದು 80 ಪರ್ಸೆಂಟ್ ಸರ್ಕಾರ. ಈ ಹಗರಣದಲ್ಲಿ ಸಿಎಂ, ಡಿಸಿಎಂ ಹಾಗೂ ನಗರಾಭಿವೃದ್ಧಿ ಸಚಿವರಿಗೆ ಎಷ್ಟು ಪಾಲಿತ್ತೆಂಬ ಬಗ್ಗೆಯೂ ಲೋಕಾಯುಕ್ತ ತನಿಖೆಯಿಂದ ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದ ನಂತರ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರಕ್ಕೆ ರೇಟ್ ಕಾರ್ಡ್ ಇಡುವುದು ಮಾತ್ರ ಬಾಕಿ ಇತ್ತು. ಆಯುಕ್ತರೊಬ್ಬರು ಮಧ್ಯವರ್ತಿಯ ಮೂಲಕ ದಂಧೆಗೆ ಇಳಿದಿದ್ದಾರೆ. ಆಳುವ ಸರ್ಕಾರದ ಆದ್ಯತೆ ಇಂಥ ಅಧಿಕಾರಿಗಳೇ ಆಗಿದ್ದಾರೆ ಎಂದು ಟೀಕಿಸಿದ್ದಾರೆ.

ಇದು ಮೇಲ್ನೋಟಕ್ಕೆ ಎಣಿಸಿದಷ್ಟು ಸಣ್ಣ ಪ್ರಕರಣವಲ್ಲ. ಟಿಡಿಆರ್ ಬದಲಾವಣೆಯ ಜಾಲ ಇದೆ. ಎಷ್ಟೇ ಪ್ರಭಾವಿಗಳಿದ್ದರೂ ಅವರ ಹೆಸರನ್ನು ಸರ್ಕಾರ ಲೌಡ್ ಸ್ಪೀಕರ್ ಲ್ಲಿ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT