ಮಂಗಳೂರು: ಪಾಲಿಕೆಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 2ನೇ ಹಂತದಲ್ಲಿ ₹ 165 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಯೋಜನೆ ವಿವಿಧ ಕಾಮಗಾರಿಗಳಿಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ದಕ್ಷಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇದೇ 18ರಂದು ಶಿಲಾನ್ಯಾಸ ನೆರವೇರಿಸುವರು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಈ ಕುರಿತು ಮಾಹಿತಿ ನೀಡಿದ ಅವರು, ‘ವಿಮಾನ ನಿಲ್ದಾಣ ಸಂಪರ್ಕಿಸುವ ಮಳವೂರು ಸೇತುವೆ ಬಳಿ ಬಾಕಿ ಉಳಿದ ರಸ್ತೆಯ ಕಾಂಕ್ರಿಟೀಕರಣಕ್ಕೆ ₹ 9 ಕೋಟಿ, ಕಾವೂರು ಮುಖ್ಯ ರಸ್ತೆ , ಕೂಳೂರು ಕಾವೂರು ಮುಖ್ಯ ರಸ್ತೆ ಬಳಿಯ ರಸ್ತೆ ಕಾಂಕ್ರಿಟೀಕರಣಕ್ಕೆ ₹ 9.50 ಕೋಟಿ, ಬಿಜೈ ಆನೆಗುಂದಿ ರಸ್ತೆಯಿಂದ ಕಾಪಿಕಾಡು ರಸ್ತೆ ವರೆಗಿನ ರಸ್ತೆ ಕಾಂಕ್ರೀಟೀಕರಣ, ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಕೋಟಿ ಚೆನ್ನಯ ವೃತ್ತದ ವರೆಗಿನ ರಸ್ತೆ ಅಭಿವೃದ್ಧಿಗೆ ₹ 9.50 ಕೋಟಿ ಸೇರಿದಂತೆ ಒಟ್ಟು 25 ಕಾಮಗಾರಿಗಳನ್ನು ಈ ಅನುದಾನದಡಿ ಕೈಗೆತ್ತಿಕೊಳ್ಳಲಾಗುತ್ತದೆ’ ಎಂದರು.

‘ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿದು, ಅನುಷ್ಠಾನ ಹಂತದಲ್ಲಿವೆ. ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿ ಮೂಲಸೌಖರ್ಯದ ಕೊಳವೆ/ ಕೇಬಲ್ ಅಳವಡಿಕೆಗೆ ಪ್ರತ್ಯೇಕ ಕಾಲುವೆ (ಯುಟಿಲಿಟಿ ಡಕ್ಟ್) ನಿರ್ಮಾಣಕ್ಕೆ ಅವಕಾಶ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ಇಲ್ಲಿ ಭವಿಷ್ಯದಲ್ಲಿ ಯಾವತ್ತೂ ಈ ಹೊಸ ಕಾಂಕ್ರೀಟ್ ರಸ್ತೆಗಳನ್ನು ಮತ್ತೆ ಅಗೆಯುವ ಪ್ರಮೇಯ ಎದುರಾಗದು’ ಎಂದರು.

‘ನಗರದಲ್ಲಿ ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಮಳೆ ನೀರು ಹರಿಯುವ ತೋಡುಗಳಲ್ಲಿ ಒಳ ಚರಂಡಿ ನೀರು ಹರಿಯುತ್ತಿದೆ. ನಗರದ ಶೇ 90ರಷ್ಟು ಪ್ರದೇಶದಲ್ಲಿ ಬಾವಿ ನೀರು ಕಲುಷಿತವಾಗಿದೆ. ವೆಟ್ ವೆಲ್ಗಳು. ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳು (ಎಸ್ಟಿಪಿ) ಸಮರ್ಪಕವಾಗಿಲ್ಲ. ಒಳಚರಂಡಿ ಕೊಳವೆ ಜಾಲ ಮೇಲ್ದರ್ಜೆಗೇರಿಸಲು ₹1250 ಕೋಟಿಯ ಪ್ರಸ್ತಾವ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ನಗರದಲ್ಲಿ ಶುದ್ಧಿ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಈ ಸಮಸ್ಯೆ ನೀಗಿಸಲು ಶಾಸಕರು ಪಕ್ಷಭೇದ ಮರೆತು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಬೇಕಿದೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಪಕ್ಷದ ಮುಖಂಡರಾದ ಶಶಿಧರ ಹೆಗ್ಡೆ, ಭಾಸ್ಕರ ಮೊಯಿಲಿ, ಡಿ.ಕೆ.ಅಶೋಕ್, ಅಪ್ಪಿ, ಪ್ರೇಮಾ, ಕೇಶವ ಮರೋಳಿ, ಸಿಮ್ರಾನ್, ಚಂದ್ರಹಾಸ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-29-1494615326

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.