ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಅನುಷ್ಠಾನಗೊಂಡಿರುವ ತಾಲ್ಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆಯು ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಅಧ್ಯಕ್ಷತೆಯಲ್ಲಿ ನಡೆಯಿತು.

ಮಾದಕ ವಸ್ತು ಸೇವನೆ ಮತ್ತು ಮಾರಾಟ ನಿಷೇಧ ಯೋಜನಾ ಸಮಿತಿ, ಟ್ರಾನ್ಸ್ಜೆಂಡರ್ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ, ಭಾಗ್ಯಲಕ್ಷ್ಮಿ ಯೋಜನೆಯ ಕಾರ್ಯಪಡೆ ಸಮಿತಿ, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಮಾರಾಟ ಹಾಗೂ ಸಾಗಾಟ ತಡೆ ಸಮಿತಿ, ಬಾಲ್ಯವಿವಾಹ ನಿಷೇಧ ಸಮಿತಿ, ಮಕ್ಕಳ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲಿಸಲಾಯಿತು.

ಮಹಿಳೆಯರು ಮತ್ತು ಮಕ್ಕಳ ಮಾರಾಟ ಪ್ರಕರಣಗಳು ಕಂಡುಬಂದಲ್ಲಿ ಇಂತಹ ಜಾಲವನ್ನು ಪತ್ತೆಹಚ್ಚಿ ಮಕ್ಕಳನ್ನು ಮತ್ತು ಮಹಿಳೆಯರನ್ನು ರಕ್ಷಿಸಬೇಕು. ಮಾದಕ ವಸ್ತು ಸೇವನೆ ತಡೆಯಲು ಜನರಿಗೆ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಕೌಟುಂಬಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಮಂಗಳೂರು ತಾಲ್ಲೂಕು ಪಂಚಾಯಿತಿ ಇಒ ಮಹೇಶ್ ಹೊಳ್ಳ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-29-714195252

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.