ಮಂಗಳೂರು: ಶಾಲಾ – ಕಾಲೇಜುಗಳ ಸನಿಹದಲ್ಲಿರುವ ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಸಿಗರೇಟ್, ತಂಬಾಕು, ಮಾದಕ ವಸ್ತುಗಳ ಮಾರಾಟ ಕಂಡುಬಂದಲ್ಲಿ ಅಂತಹ ಅಂಗಡಿಗಳ ಪರವಾನಗಿ ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ನಾರ್ಕೊ ಸಮನ್ವಯ ಕೇಂದ್ರ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಶಾಲೆ ಪರಿಸರದಲ್ಲಿ ಯಾವುದೇ ಧೂಮ ಪಾನ ಅಥವಾ ಮಾದಕ ವಸ್ತುಗಳ ಚಟುವಟಿಕೆ ನಡೆಯದಿರುವ ಬಗ್ಗೆ ಎಲ್ಲ ಎಸ್ಡಿಎಂಸಿಗಳು ಪರಿಶೀಲಿಸಿರುವ ಬಗ್ಗೆ ಶಿಕ್ಷಣ ಇಲಾಖೆ ವರದಿ ಪಡೆಯಬೇಕು ಎಂದರು.

ಹೋಂ ಸ್ಟೇ ಮತ್ತು ವಸತಿಗೃಹಗಳಲ್ಲಿ ಆಗಾಗ ತಪಾಸಣೆ ನಡೆಸಬೇಕು. ಕರಾವಳಿ ಭದ್ರತಾ ಪೊಲೀಸರು ಅನಿರೀಕ್ಷಿತವಾಗಿ ಬೋಟ್ಗಳ ತಪಾಸಣೆ ನಡೆಸಬೇಕು. ಕೆ.ಎಸ್.ಆರ್.ಟಿ.ಸಿ ಬಸ್ಗಳ ಪಾರ್ಸೆಲ್ಗಳ ಮೇಲೆ ನಿಗಾ ವಹಿಸಬೇಕು ಎಂದರು.

ಡ್ರಗ್ಸ್ ಸೇರಿದಂತೆ ವಿವಿಧ ಮಾದಕ ವಸ್ತುಗಳ ಚಟಕ್ಕೆ ಬಿದ್ದ ಮಕ್ಕಳನ್ನು ಅದರಿಂದ ಹೊರಗೆ ತರಲು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೌನ್ಸಿಲಿಂಗ್ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಇಲ್ಲಿಗೆ ಕರೆತರಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು. ಉಪ ಪೊಲೀಸ್ ಆಯುಕ್ತ ಮಿಥುನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-29-487836660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.