ಮಂಗಳೂರು: ಸರ್ಕಾರಿ ಆಸ್ಪತ್ರೆಗಳ ನಿರ್ವಹಣೆಯನ್ನು ಖಾಸಗಿ ಆಸ್ಪತ್ರೆಗಳಿಗೆ ವಹಿಸುವ ಒಪ್ಪಂದ ರದ್ದುಗೊಳಿಸಬೇಕು, ಪ್ರತಿ ಜಿಲ್ಲೆಯಲ್ಲಿ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದ್ರೋಗ ಆಸ್ಪತ್ರೆಯ ಘಟಕಗಳನ್ನು ನಗರದಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಚಲೋ ಮಂಗಳವಾರ ನಡೆಯಿತು.

ಉಸ್ತುವಾರಿ ಸಚಿವರ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ಅರ್ಧದಲ್ಲೇ ತಡೆದರು.

ನಗರದ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಿಂದ ಪಾದಯಾತ್ರೆಯಲ್ಲಿ ಹೊರಟ ಕಾರ್ಯಕರ್ತರು ಪಡೀಲ್ ನ ಜಿಲ್ಲಾ ಆಡಳಿತ ಸಂಕೀರ್ಣ ಪ್ರಜಾಸೌಧದಲ್ಲಿರುವ ಜಿಲ್ಲಾ ಉಸ್ತುವಾರಿ ಕಚೇರಿ ಸಮೀಪಿಸುತ್ತಿದ್ದಂತೆಯೇ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಈ ವೇಳೆ ಪೊಲೀಸರ ಮತ್ತು ಹೋರಾಟಗಾರರ ನಡುವೆ ತಳ್ಳಾಟ ನಡೆಯಿತು. ಈ ವೇಳೆ ಪ್ರತಿಭಟನಾಕಾರರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು, ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದುಬಾರಿ ದರ ವಿಧಿಸದಂತೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಅಧ್ಯಕಣ ಬಿ.ಕೆ.ಇಮ್ತಿಯಾಜ್, 'ಹಲವು ವರ್ಷಗಳಿಂದ ಸಂಘಟನೆ ಇಟ್ಟಿರುವ ಬೇಡಿಕೆಯನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ . ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕಾದ ಆರೋಗ್ಯ ಇಲಾಖೆ, ಅದರ ಬದಲು ಖಾಸಗಿ ಆಸ್ಪತ್ರೆಗಳ ಲಾಬಿಗೆ ಶರಣಾಗಿದೆ. ವಿರೋಧ ಪಕ್ಷ ಬಿಜೆಪಿ ಕೂಡ ಈ ಬಗ್ಗೆ ಧ್ವನಿ ಎತ್ತದೇ ಮೌನ ವಹಿಸಿದೆ. ಜಿಲ್ಲೆಯ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರೂ ಖಾಸಗಿ ಆಸ್ಪತ್ರೆಗಳ ಲಾಬಿ ಕುರಿತು ಒಂದೇ ರೀತಿಯ ಒಲವನ್ನು ಹೊಂದಿದ್ದಾರೆ. ಡಿವೈಎಫ್ಐ ಬೇಡಿಕೆಗಳು ಈಡೇರುವವರೆಗೂ ಚಳವಳಿ ಮುಂದುವರಿಯಲಿದೆ' ಎಂದರು.

ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಕಾರ್ಯದರ್ಶಿ ಸಂತೋಷ್ ಬಜಾಲ್, 'ಜಿಲ್ಲೆಯಲ್ಲಿ ಹೃದಯ ಮತ್ತು ಕ್ಯಾನ್ಸರ್ ಕಾಯಿಲೆಗಳಿಗೆ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾದವರ ಸಂಖ್ಯೆ ಒಂದೇ ವರುಷದಲ್ಲಿ ಅನೇಕ ಪಟ್ಟು ಹೆಚ್ಚಳಗೊಂಡಿದೆ. ಇಲ್ಲಿ ಕಿದ್ವಾಯಿ ಹಾಗೂ ಜಯದೇವ ಆಸ್ಪತ್ರೆಗಳ ಘಟಕಗಳನ್ನು ಸ್ಥಾಪಿಸುವ ಬೇಡಿಕೆಗೆ ಸ್ಪಂದಿಸದ ಆರೋಗ್ಯ ಸಚಿವರು ಜಿಲ್ಲೆಯ ಜನರ ಆರೋಗ್ಯದ ಹಕ್ಕನ್ನು ಕಡೆಗಣಿಸಿದ್ದಾರೆ. ಸರ್ಕಾರಿ ಆಸ್ಪತ್ರೆ ಬಲಪಡಿಸುವ ಪ್ರತಿಭಟನೆಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸುವ ಮೂಲಕ ಹೋರಾಟ ಹತ್ತಿಕ್ಕಲು ಪ್ರಯತ್ನಿಸಿದೆ. ಆದರೂ ಹೋರಾಟದಿಂದ ಡಿವೈಎಫ್ಐ ಹಿಂದೆ ಸರಿಯದು. ಜನರ ಆರೋಗ್ಯ ಹಕ್ಕನ್ನು ಖಾತರಿ ಪಡಿಸಲು ಆರೋಗ್ಯ ಸಚಿವ ದುನೇಶ್ ಗುಂಡೂರಾವ್ ಅವರಿಗೆ ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಲಿ' ಎಂದರು.

ಪ್ರೊ.ನರೇಂದ್ರ ನಾಯಕ್ ಪಾದಯಾತ್ರೆ ಉದ್ಘಾಟಿಸಿದರು.

ಪ್ರತಿಭಟನೆಯಲ್ಲಿ ಡಿವೈಎಫ್ಐ ಜಿಲ್ಲಾ ಮುಖಂಡರಾದ ಮನೋಜ್ ವಾಮಂಜೂರು, ನಿತಿನ್ ಕುತ್ತಾರ್, ರಿಜ್ವಾನ್ ಹರೇಕಳ, ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ಅಶ್ರಫ್ ಹರೇಕಳ, ರಜಾಕ್ ಮುಡಿಪು, ಹನೀಫ್ ಬೆಂಗರೆ, ಕಾರ್ಮಿಕ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಬಿ.ಎಮ್ ಭಟ್, ಶಶಿಧರ್ ಶಕ್ತಿನಗರ, ಮಹಿಳಾ ಸಂಘಟನೆಯ ಮುಖಂಡರಾದ ಕಿರಣ ಪ್ರಭಾ, ಪ್ರಮಿಳಾ ಶಕ್ತಿನಗರ, ಅಸುಂತ ಡಿಸೋಜ, ರೋಹಿಣಿ ಜಲ್ಲಿಗುಡ್ಡೆ, ದಲಿತ ಹಕ್ಕುಗಳ ಸಮಿತಿಯ ಕೃಷ್ಣ ತಣ್ಣೀರುಬಾವಿ, ಕೃಷ್ಣ ಇನ್ನಾ, ಸಮುದಾಯದ ವಾಸುದೇವ ಉಚ್ಚಿಲ, ರಮೇಶ್ ಉಳ್ಳಾಲ, ಮಹಾಬಲ ಟಿ ದೆಪ್ಪೆಲಿಮಾರ್, ಶೇಖರ್ ಕುಂದರ್, ಇಬ್ರಾಹಿಂ ಮದಕ, ಅಬೂಬಕ್ಕರ್ ಜಲ್ಲಿ, ನಾಸಿರ್ ಬಾಸ್, ಬಿಲಾಲ್ , ಸುನೀಲ್ ತೇವುಲ, ಶ್ರೀನಾಥ್ ಕಾಟಿಪಳ್ಳ, ಮಕ್ಸೂದು ಸುರತ್ಕಲ್, ಅಜ್ಮಲ್ ಕಾನ, ತಸ್ರೀಫ್ ಬೆಂಗರೆ, ನೌಶದ್ ಬೆಂಗರೆ, ಯಶ್ ರಾಜ್ ಬಜಾಲ್, ದಿರಾಜ್ ಬಜಾಲ್, ದೀಪಕ್ ಬಜಾಲ್ , ವಿದ್ಯಾರ್ಥಿ ಸಂಘಟನೆಯ ವಿನುಶ ರಮಣ ಭಟ್, ಅಭಿಶೇಕ್ ಬೆಳ್ತಂಗಡಿ, ನಝೀರ್ ಕಕ್ಕಿಂಜೆ, ರಜಾಕ್ ಮೊಂಟೆಪದವು, ಸಂಕೇತ್ ಕುತ್ತಾರ್ , ಅಲೆಮಾರಿ ಸಮುದಾಯದ ವೆಂಕಟೇಶ್, ಲಕ್ಷ್ಮಣ ಮುಂತಾದವರು ಭಾಗವಹಿಸಿದ್ದರು.

ಬಂಧನಕ್ಕೊಳಗಾದ ಡಿವೈಎಫ್ಐ ನಾಯಕರು ಸಹಿತ ನೂರಾರು ಕಾರ್ಯಕರ್ತರನ್ನು ಪೊಲೀಸರು ಬಳಿಕ ಬಿಡುಗಡೆ ಮಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.