ಮಂಗಳೂರು: ಗಾಂಜಾ ಸಾಗಾಟ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದ್ದ ವ್ಯಕ್ತಿ ಮೇಲಿನ ಆರೋಪವು ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತಗತಿ ನ್ಯಾಯಾಲಯ–1ರಲ್ಲಿ ಸಾಬೀತಾಗಿದೆ. ಅಪರಾಧಿಗೆ ನ್ಯಾಯಾಲಯವು ಆರು ತಿಂಗಳು ಕಠಿಣ ಜೈಲು ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿದೆ.

ಸಲಾವುದ್ದೀನ್ ಶಿಕ್ಷೆಗೆ ಒಳಗಾದ ವ್ಯಕ್ತಿ. ನಗರದ ಕಸಬಾ ಗ್ರಾಮದ ಹಳೆ ಬಂದರು ಉಪ್ಪಿನ ದಕ್ಕೆಯಲ್ಲಿ ಕರಾವಳಿ ಕಾವಲು ಠಾಣೆಯ ಪೊಲೀಸರು 2020ರ ಜ.30ರಂದು ಹಡಗಿನ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಸಲಾವುದ್ದೀನ್ ಬಳಿ ಇದ್ದ ಚೀಲದಲ್ಲಿ 100 ಗ್ರಾಮ್ ಗಾಂಜಾ ಪತ್ತೆಯಾಗಿತ್ತು. ಆ ಗಾಂಜಾವನ್ನು ವಶಕ್ಕೆ ಪಡೆದ ಪೊಲೀಸರು ಆತನನ್ನು ಬಂಧಿಸಿದ್ದರು.

ಕರಾವಳಿ ಕಾವಲು ಠಾಣೆಯ ಪೊಲೀಸರು ಸಲಾವುದ್ದೀನ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ 3ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಯನ್ನು ಬಿಡುಗಡೆಗೊಳಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಮೇಲ್ಮನವಿ ಸಲ್ಲಿಸಿತ್ತು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ತ್ವರಿತಗತಿ) ನ್ಯಾಯಾಲಯ–1 ಮೇಲ್ಮನವಿಯನ್ನು ಪರಿಗಣಿಸಿ ಪ್ರಕರಣದ ವಿಚಾರಣೆ ನಡೆಸಿತ್ತು.

ಸಲಾವುದ್ದೀನ್ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿರುವ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತಗತಿ ನ್ಯಾಯಾಲಯ–1ರ ನ್ಯಾಯಾಧೀಶರಾದ ಮೋಹನ ಜೆ.ಎಸ್. ಅವರು ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿ ಗುರುವಾರ ಆದೇಶ ಮಾಡಿದ್ದಾರೆ. ಆತನಿಗೆ ಎನ್.ಡಿ.ಪಿ.ಎಸ್ ಕಾಯ್ದೆಯ ಸೆಕ್ಷನ್ 8 (ಸಿ) ಮತ್ತು 20(ಬಿ) (ii) (ಎ) ಪ್ರಕಾರ 6 ತಿಂಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 5 ಸಾವಿರ ದಂಡವನ್ನು ವಿಧಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸಿದ್ದ ಸರ್ಕಾರಿ ವಕೀಲ ಕೆ.ಬದರಿನಾಥ ನಾಯರಿ ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-29-915329565

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.