ಮಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರವೇ ವೈದ್ಯರ ಸಹಿತ ಮೂಲ ಸೌಲಭ್ಯ ಕಲ್ಪಿಸಿ, ಬಲಗೊಳಿಸಬೇಕು, ಕಿದ್ವಾಯಿ, ಜಯದೇವ ಆಸ್ಪತ್ರೆ ಘಟಕಗ ಳನ್ನು ಜಿಲ್ಲೆಗೆ ತಕ್ಷಣ ಮಂಜೂರು ಗೊಳಿ ಸಬೇಕು. ಪುತ್ತೂರಿಗೆ ಮಂಜೂರು ಆಗಿರುವ ಸರ್ಕಾರಿ ವೈದ್ಯಕೀಯ ಕಾಲೇ ಜನ್ನು ಶೀಘ್ರ ಸ್ಥಾಪಿಸಬೇಕು ಎಂದು ಇಲ್ಲಿನ ನಡೆದ ದುಂಡುಮೇಜಿನ ಸಭೆ ಆಗ್ರಹಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳ ಸಹಭಾಗಿತ್ವದಲ್ಲಿ ನಡೆಸುವ ರಾಜ್ಯ ಸರ್ಕಾರದ ಆದೇಶದ ಕುರಿತು ಚರ್ಚಿಸಲು ಮಂಗಳವಾರ ಇಲ್ಲಿ ನಡೆದ ಸಮಾನ ಮನಸ್ಕ ರಾಜಕೀಯ ಪಕ್ಷಗಳು, ಸಮಾನ ಮನಸ್ಕ ಸಂಘಟನೆಗಳ ಸಭೆಯಲ್ಲಿ, ಸಾರ್ವಜನಿಕ ಆಸ್ಪತ್ರೆಗಳು ಇಲ್ಲದ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ತಾಲ್ಲೂಕು ಆಸ್ಪತ್ರೆ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.

ಜಿಲ್ಲೆಯ ಸರ್ಕಾರಿ ಆಸ್ಪತ್ರೆ ನಡೆಸಲು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೀಡಿರುವ ಆದೇಶ ಕೈ ಬಿಡಲು ಒತ್ತಾಯಿಸಿ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯ ಬಲವರ್ಧನೆಗೆ ಆಗ್ರಹಿಸಿ ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಚಳವಳಿ ನಡೆಸಲು ಸಭೆಯಲ್ಲಿ ಭಾಗವಹಿಸಿದ್ದ ಸಂಘಟನೆಗಳ ಪ್ರತಿನಿಧಿಗಳು ತೀರ್ಮಾನಿಸಿದರು.

ಇತ್ತೀಚೆಗೆ ಪುರಭವನದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು, ಸರ್ಕಾರಿ ಅಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಅವಹೇಳನಕಾರಿ ಪದ ಪ್ರಯೋಗ ಮಾಡಿ ನಿಂದಿಸಿರುವುದು ಖಂಡನೀಯ. ಅವರು ಸ್ಪೀಕರ್ ಸ್ಥಾನದ ನೈತಿಕ ಗೆರೆಯನ್ನು ಉಲ್ಲಂಘಿಸಿ ಮಾತನಾಡುವುದು ಸರಿ ಯಲ್ಲ ಎಂದು ಸಭೆ ನಿರ್ಣಯ ಸ್ವೀಕರಿಸಿತು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ರಾಜ್ಯ ಕಾರ್ಯ ದರ್ಶಿ ಮಂಡಳಿ ಸದಸ್ಯ ಕೆ.ಯಾದವ ಶೆಟ್ಟಿ, ಆಪ್ ರಾಜ್ಯ ಉಪಾಧ್ಯಕ್ಷ ವಿವೇಕಾನಂದ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಸ್.ಎಲ್. ಪಿಂಟೊ, ವಿಚಾರವಾದಿ ಪ್ರೊ.ನರೇಂದ್ರ ನಾಯಕ್, ವಾಸುದೇವ ಉಚ್ಚಿಲ, ಅಖಿಲ ಭಾರತ ವಕೀಲರ ಸಂಘದ ಯಶವಂತ ಮರೋಳಿ, ನಿತಿನ್ ಕುತ್ತಾರ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರೆ, ದಲಿತ ನಾಯಕರಾದ ಎಂ ದೇವದಾಸ್, ರಘು ಎಕ್ಕಾರು, ಕೃಷ್ಣಾನಂದ ಡಿ ಎಸ್, ಸಿಐಟಿಯು ಜಿಲ್ಲಾಧ್ಯಕ್ಷ ಬಿ.ಎಂ.ಭಟ್, ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ಕಿರಣ ಪ್ರಭ, ಕಾರ್ಯದರ್ಶಿ ಪ್ರಮೀಳಾ ಕೆ ಮೊದಲಾದವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-29-1092364793

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.