ಮಂಗಳೂರು: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ, ಆರೋಗ್ಯ ಕ್ಷೇತ್ರದ ಖಾಸಗೀಕರಣದ ನೀತಿಯ ಕುರಿತು ಚರ್ಚಿಸಿ ಮುಂದಿನ ಹೋರಾಟವನ್ನು ತೀರ್ಮಾನಿಸಲು ಸಿಪಿಎಂ ಜಿಲ್ಲಾ ಸಮಿತಿಯು ಮೇ 26ರಂದು ಸಂಜೆ 4 ಗಂಟೆಗೆ ನಗರದ ಸಹೋದಯ ಸಭಾಂಗಣದಲ್ಲಿ ದುಂಡು ಮೇಜಿನ ಸಭೆ ಆಯೋಜಿಸಿದೆ.

ಸಭೆಯಲ್ಲಿ ಎಡಪಕ್ಷಗಳು, ರೈತ, ದಲಿತ, ಕಾರ್ಮಿಕ, ಯುವಜನ, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು, ಬರಹಗಾರರು, ಚಿಂತಕರು ಭಾಗವಹಿಸಲಿದ್ದಾರೆ ಎಂದು ಸಿಪಿಎಂ ಪ್ರಕಟಣೆ ತಿಳಿಸಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವುದನ್ನು ಸಮರ್ಥಿಸಿರುವುದು, ಇದನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟವನ್ನು ಕೆಟ್ಟದಾಗಿ ಚಿತ್ರಿಸಲು ಯತ್ನಿಸಿರುವುದು ಖಂಡನೀಯ. ಜನರ ಆರೋಗ್ಯ ರಕ್ಷಣೆಯ ಜವಾಬ್ದಾರಿಯಿಂದ ಸರ್ಕಾರ ನುಚುಚಿಕೊಳ್ಳುವುದು, ಕಾರ್ಪೊರೇಟ್ ಆರೋಗ್ಯ ಲಾಬಿಗಳ ಏಕಸ್ವಾಮ್ಯಕ್ಕೆ ಅವಕಾಶ ಕೊಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-28-1852182259

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.