ಮಂಗಳೂರು: ಗೃಹಲಕ್ಷ್ಮಿ ಯೋಜನೆಯ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಇನ್ನೂ ಜಮೆಯಾಗುತ್ತಿದ್ದು, ಆ ಹಣವನ್ನು ಮರಳಿ ಪಡೆಯಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಮೃತ ಫಲಾನುಭವಿಗಳ ಖಾತೆಗೆ ₹22 ಕೋಟಿ ಅನುದಾನ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ರಾಜ್ಯ ಕಚೇರಿ ತಿಳಿಸಿದೆ. ಅಂತಹ ಫಲಾನುಭವಿಗಳ ಮಾಹಿತಿ ಪಡೆಯಲು ಕ್ರಮ ವಹಿಸಬೇಕು ಎಂದರು. ಇಲಾಖೆಯ ಮಾಹಿತಿಯಲ್ಲಿ ಜೀವಂತವಿರುವ ಗೃಹಲಕ್ಷ್ಮಿ ಫಲಾನುಭವಿ ಮರಣ ಹೊಂದಿರುವುದಾಗಿ ದಾಖಲಾ ಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದಿನ ಸಭೆಗೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಮರಣ ಹೊಂದಿದ ಫಲಾನುಭವಿಯ ಹೆಸರು, ಖಾತೆ ಸಂಖ್ಯೆ ಹಾಗೂ ಬ್ಯಾಂಕಿನ ವಿವರಗಳು ಇದ್ದಲ್ಲಿ ಬ್ಯಾಂಕ್ ಮುಖಾಂತರ ಕ್ರಮ ಕೈಗೊಳ್ಳಬಹುದು. ಇಲ್ಲವಾದರೆ ಮರಣಹೊಂದಿದವರ ಮಾಹಿತಿ ಗ್ರಾಮ ಕರಣಿಕರ ಕಚೇರಿಯಲ್ಲಿ ಲಭ್ಯವಿರುತ್ತದೆ. ಅದನ್ನು ಪಡೆದು ಹಣ ಬಿಡುಗಡೆ ಆಗುವುದನ್ನು ತಡೆಯಬಹುದು ಎಂದರು.

ನೆಲ್ಯಾಡಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಜಾಗ ಒತ್ತುವರಿ ಮಾಡಲಾಗಿದ್ದು, ಬಸ್ ನಿಲ್ದಾಣ ಆದ ಬಳಿಕ 2 ಮನೆಗಳಿಗೆ ‘94 ಸಿ’ ಹಕ್ಕುಪತ್ರ ನೀಡಲಾಗಿದೆ. 3 ಮನೆಗಳಿಗೆ ರಸ್ತೆ ನಿರ್ಮಿಸಲು ಆ ಜಾಗ ವನ್ನು ಉಪಯೋಗಿಸಿಕೊಳ್ಳಲಾಗಿದೆ. ಸುಮಾರು 30 ಸೆಂಟ್ಸ್ ಜಾಗ ಕೆಎಸ್ಆರ್ ಟಿಸಿಗೆ ಅನುಮೋದನೆಯಾದ ನಂತರ ಒತ್ತುವರಿಯಾಗಿದೆ. ಒತ್ತುವರಿ ಮಾಡಿ ದವರ ವಿರುದ್ಧ ಕ್ರಮ ವಹಿಸಬೇಕು ಎಂದು ಸಮಿತಿಯ ಸದಸ್ಯರು ಆಗ್ರಹಿಸಿದರು. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಸುಷ್ಮಾ ಕೆ.ಎಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಜೋಕಿಂ ಡಿಸೋಜ, ನಾರಾಯಣ ನಾಯಕ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿ.ಎ, ಶಾಹುಲ್ ಹಮೀದ್, ಉಮಾನಾಥ್ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಸುಧೀರ್ ಕುಮಾರ್ ಶೆಟ್ಟಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-29-694605031

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.