ಮಂಗಳೂರು: ಈ ಹಿಂದೆ ಹಜ್ ಯಾತ್ರೆಗೆ ತೆರಳುವವರು ಬಜಪೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ವಿಮಾನದಲ್ಲಿ ಪ್ರಯಾಣ ಕೈಗೊಳ್ಳಲು ಅವಕಾಶವಿತ್ತು. ಸ್ಥಗಿತಗೊಂಡ ಈ ವ್ಯವಸ್ಥೆಯನ್ನು ಮತ್ತೆ ಆರಂಭಿಸಬೇಕು ಎಂದು ಎಸ್ಡಿಪಿಐ ಒತ್ತಾಯಿಸಿದೆ.

ಈ ಕುರಿತು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಎಸ್ಡಿಪಿಐ ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಅನ್ವರ್ ಸಾದತ್, ರಾಜ್ಯದಿಂದ 7500 ಮಂದಿ ಹಜ್ ಕಮಿಟಿ ಮೂಲಕ ಯಾತ್ರೆ ಕೈಗೊಳ್ಳುತ್ತಾರೆ. ಇವರಲ್ಲಿ ಸುಮಾರು 1300 ಮಂದಿ ಮಂಗಳೂರು ಪ್ರದೇಶದವರು. ಅವರು ಬೆಂಗಳೂರಿಗೆ ತೆರಳಿ, ಅಲ್ಲಿ ವಾಸ್ತವ್ಯವಿದ್ದು ವಿಮಾನಯಾನ ಕೈಗೊಳ್ಳುವುದಕ್ಕೆ ನಾನಾ ಸಮಸ್ಯೆಗಳಿವೆ ಎಂದರು.

ಹಜ್ ಯಾತ್ರೆಯ ಪ್ರಕ್ರಿಯೆ ಶುರುವಾಗಿದೆ. ರಾಜ್ಯದಿಂದ ಹಜ್ ಯಾತ್ರಿಕನ್ನು ಕರೆದೊಯ್ಯುವ ವಿಮಾನ ಮೇ 5ರಂದು ಜೆಡ್ಡಾಕ್ಕೆ ಪ್ರಯಾಣ ಬೆಳೆಸಲಿದೆ. ಈಗ ಪ್ರಯತ್ನಿಸಿದರೂ ಮಂಗಳೂರಿನಿಂದಲೇ ಹಜ್ ವಿಮಾನ ಆರಂಭಿಸಬಹುದು ಎಂದರು.

ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದ ಹಜ್ ಯಾತ್ರೆಗೆ ಯಾವುದೇ ತಿಂದರೆ ಆಗದು. ಈಗಲೂ ಜಡ್ಡಾಕ್ಕೆ ವಿಮಾನ ಯಾನ ಎಂದಿಂತೆಯೇ ಮುಂದುವರಿದಿದೆ ಎಂದರು.

ಜಿಲ್ಲೆಯಲ್ಲಿ ಹಜ್ ಭವನಕ್ಕೆ ಮೂರೂವರೆ ಎಕರೆ ಜಾಗವೂ ಲಭ್ಯವಿದ್ದು, ಶಂಕುಸ್ಥಾಪನೆಯನ್ನೂ ನೆರವೇರಿಸಲಾಗಿದೆ. ಆದರೆ ಹಜ್ ಭವನ ಇನ್ನೂ ಮರೀಚಿಕೆಯಾಗಿಯೇ ಇದೆ. ರಾಜ್ಯದಲ್ಲಿ ಆಡಳಿತ ನಡೆಸಿದ ರಾಜಕೀಯ ಪಕ್ಷಗಳಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಮುಸ್ಲೀಮರ ನೆನಪಾಗುತ್ತದೆ. ಜಿಲ್ಲೆಯ ಮುಸ್ಲಿಂ ಸಮುದಾಯದ ಶಾಸಕ ಪ್ರಭಾವಿ ರಾಜಕಾರಣಿಯಾಗಿದ್ದರೂ, ಹಜ್ ಭವನ ಇನ್ನೂ ನಿರ್ಮಾಣವಾಗದಿರುವುದು ಬೇಸರದ ವಿಷಯ ಎಂದರು.

ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯದರ್ಶಿ ಶಾಕೀರ್ ಅಳಕೆಮಜಲ್, ನಗರ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಅಶ್ರಫ್ ಅಡ್ಡೂರು, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-29-1918400573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.