ಮಂಗಳೂರು: ಪಂಢರಪುರದ ಚೈತನ್ಯ ಸದ್ಗುರು ಹರಿಪ್ರಸಾದ ಶರದಸ್ವಾಮಿ ಶಿವೂರಕರ ನೇತೃತ್ವದಲ್ಲಿ, ಕನ್ಯಾಡಿಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜ್ಞಾನೇಶ್ವರಿಯ ಸಾಮೂಹಿಕ ಪಾರಾಯಣ ಹಾಗೂ ಅಖಂಡ ಹರಿನಾಮ ಸಪ್ತಾಹ ಜೂನ್ 7ರಿಂದ 13ರವರೆಗೆ ಧರ್ಮಸ್ಥಳದ ಕನ್ಯಾಡಿಯ ಶ್ರೀರಾಮ ಕ್ಷೇತ್ರದಲ್ಲಿ ನಡೆಯಲಿದೆ.

ಈ ಕುರಿತು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಂಢರಪುರದ ಚೈತನ್ಯ ಸದ್ಗುರು ಹರಿಪ್ರಸಾದ ಶರದಸ್ವಾಮಿ ಶಿವೂರಕರ, 7ರಂದು ಬೆಳಿಗ್ಗೆ 7ಕ್ಕೆ ‘ಗ್ರಂಥರಾಜ ಜ್ಞಾನೇಶ್ವರಿ’ ಬಿಡುಗಡೆಯಾಗಲಿದ್ದು, ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಮುಖಂಡರಾದ ಡಿ.ವಿ. ಸದಾನಂದ ಗೌಡ, ಡಾ.ಕಲ್ಲಡ್ಕ ಪ್ರಭಾಕರ ಭಟ್, ಪಿ.ಎಸ್. ಪ್ರಕಾಶ್, ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸುವರು ಎಂದರು.

ಮಧ್ಯಾಹ್ನ 11ರಿಂದ 1 ಗಂಟೆಯವರೆಗೆ ಸಾಮೂಹಿಕ ಪಾರಾಯಣ, ಸಂಜೆ 4.30ರಿಂದ ಪ್ರವಚನ, ನಾಮಜಪ, ಕೀರ್ತನೆ, ಜಾಗರಣೆ ನಡೆಯಲಿದೆ. ಪಂಢರಪುರದ 720 ವರ್ಷಗಳ ಇತಿಹಾಸ ಇರುವ ವಾರ್ಖರಿ ಸಂಪ್ರದಾಯವನ್ನು ದಕ್ಷಿಣ ಭಾಗಗಳಿಗೆ ಪರಿಚಯ ಮಾಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಪಾರಾಯಣ ಸೇವಾ ಸಮಿತಿಯ ಅಧ್ಯಕ್ಷ ಆರ್.ಟಿ. ಪಾಟೀಲ, ಉಪಾಧ್ಯಕ್ಷ ರಮೇಶ ಅರಕೇರಿ, ಭೀಮಸಿಂಗ್ ರಜಪೂತ್, ಗೋಪಾಲ ರಾವ್, ವಿನೋದ್ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-29-746592410

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.