ಮಂಗಳೂರು: ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಸಂಬಂಧ ಸರ್ಕಾರದ ಮೇಲೆ ಒತ್ತಡ ತರಲು, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ನೇತೃತ್ವದಲ್ಲಿ ಶುಕ್ರವಾರ ಇಲ್ಲಿ ಸಮಾಲೋಚನಾ ಸಭೆ ನಡೆಯಿತು.

‘ಹೈಕೋರ್ಟ್ ಪೀಠ ಸ್ಥಾಪನೆಗೆ ಮುಖ್ಯಮಂತ್ರಿ ಬಳಿ ವಿನಂತಿಸಿದ್ದು, ಅವರು ಹಸಿರು ನಿಶಾನೆ ತೋರಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ ಮಾಡಿ ವಿನಂತಿಸಲಾಗಿದೆ. ಅವರು ಮಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಎಲ್ಲರೂ ಸಹಕಾರ ನೀಡಬೇಕು’ ಎಂದು ಐವನ್ ಡಿಸೋಜ ಹೇಳಿದರು.

‘ಕರಾವಳಿ ಭಾಗದಲ್ಲಿ 10 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಕ್ಕೆ ಬಾಕಿ ಇವೆ. ಹೈಕೋರ್ಟ್ಗೆ ಹೋಗಲು ಇಲ್ಲಿಂದ 400 ಕಿ.ಮೀ ಪ್ರಯಾಣಿಸಬೇಕು. ಇದರಿಂದ ಜನರಿಗೆ ನ್ಯಾಯ ಪಡೆಯುವುದು ಕಷ್ಟವಾಗುತ್ತದೆ ಜೊತೆಗೆ ಹಣವೂ ವ್ಯಯವಾಗುತ್ತದೆ ಎಂದರು.

ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಮುದಸ್ಸರ್, ಎಸ್ಡಿಎಂ ಕಾನೂನು ಕಾಲೇಜು ಪ್ರಾಚಾರ್ಯ ತಾರಾನಾಥ್, ಐಎಂಎ ಘಟಕದ ಕಾರ್ಯದರ್ಶಿ ಡಾ. ಜೂಲಿಯಾನ ಸಲ್ದಾನ, ಡಾ. ಜಿ.ಕೆ. ಭಟ್, ಕಥೋಲಿಕ್ ಸಭಾದ ಅಧ್ಯಕ್ಷ ಸಂತೋಷ್ ಡಿಸೋಜ, ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ತುಳು ಸಾಹಿತ್ಯ ಅಕಾಡೆಮಿ ತಾರಾನಾಥ್ ಗಟ್ಟಿ, ರಾಜೇಶ್, ಅನಿಲ್ ಲೋಬೊ, ವಿನೋದ್, ಅರುಣ್ ರಾಜ್, ನಿವೃತ್ತ ಬಿ.ಎಂ. ರಾಜ್ ಗೋಪಾಲ್, ರಾಘವೇಂದ್ರ ರಾವ್, ಎಸ್. ರಸೀದ್ ಹಾಜ್, ಪುರುಷೋತ್ತಮ್ ಕೆ.ಡಿ., ಮನೋಹರ್ ಶೆಟ್ಟಿ, ದಯಾನಂದ್ ರೈ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-29-1920731547

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.