ಮಂಗಳೂರು: ನಗರದಲ್ಲಿ ಹೈಕೋರ್ಟ್ ಸಂಚಾರ ಪೀಠ ಸ್ಥಾಪನೆಗೆ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಅಗತ್ಯ ಸೌಕರ್ಯ ಕಲ್ಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಪತ್ರ ಬರೆದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಈ ಕುರಿತು ಮಾಹಿತಿ ನೀಡಿದ ಅವರು,‘ಹೈಕೋಟ್ನ ಮುಖ್ಯ ನ್ಯಾಯಮೂರ್ತಿ ನೇತೃತ್ವದ ನಿಯೋಗವು ಮೇ ತಿಂಗಳ ಅಂತ್ಯದಲ್ಲಿ ಅಥವಾ ಜೂನ್ ತಿಂಗಳ ಮೊದಲ ವಾರದಲ್ಲಿ ಮಂಗಳೂರಿಗೆ ಭೇಟಿ ನೀಡಿ ಇಲ್ಲಿ ಲಭ್ಯ ಇರುವ ಮೂಲ ಸೌಕರ್ಯಗಳನ್ನು ಪರಿಶೀಲಿಸಲಿದೆ’ ಎಂದರು.

‘ಹೈಕೋರ್ಟ್ನ ಸಂಚಾರ ಪೀಠ ಸ್ಥಾಪಿಸಲು ಅಗತ್ಯವಾದ ಎಲ್ಲಾ ಸೌಲಭ್ಯ ಒದಗಿಸಲು ಸಿದ್ಧ. ಪೀಠವು ಯಾವುದೇ ಅಡೆತಡೆಗಳಿಲ್ಲದೆ ಕಾರ್ಯ ನಿರ್ವಹಿಸಲು ಅಗತ್ಯವಾದ ಆಡಳಿತಾತ್ಮಕ ಹಾಗೂ ಇತರ ಕಚೇರಿ ಹಾಗೂ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿಯವರು ಪತ್ರದಲ್ಲಿ ತಿಳಿಸಿದ್ದಾರೆ. ಮುಂಬರುವ ಅಕ್ಟೋಬರ್ ಒಳಗೆ ಸಂಚಾರ ಪೀಠ ಕಾರ್ಯಾರಂಭ ಆಗಬೇಕು ಎಂಬುದು ನಮ್ಮ ಆಶಯ’ ಎಂದರು.

‘₹50ಸಾವಿರ ಚದರ ಅಡಿ ವಿಸ್ತೀರ್ಣದ ಹಳೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಟ್ಟಡ ಸಂಚಾರ ಪೀಠ ಆರಂಭಿಸಲು ಸೂಕ್ತವಾಗಿದೆ. ನ್ಯಾಯಾಧೀಶರಿಗೆ ವಸತಿ ಸೌಲಭ್ಯ ಒದಗಿಸಲು ಐಎಎಸ್ ಅಧಿಕಾರಿಗಳಿಗಾಗಿ ನಿರ್ಮಾಣವಾಗಿರುವ ವಸತಿಗೃಹಗಳ ಜಾಗದ ಸಮೀಪ ನಿವೇಶನ ಗುರುತಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಹಳೆ ಜಿಲ್ಲಾಧಿಕಾರಿ ಕಚೇರಿಯ ನವೀಕರಣ ಹಾಗೂ ನ್ಯಾಯಾಧೀಶರಿಗೆ ಅಗತ್ಯ ವಸತಿ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆಯ ಮೂಲಕ ಒದಗಿಸಲು ಕೋರಿದ್ದೇವೆ. ಲೋಕೋಪಯೋಗಿ ಸಚಿವರನ್ನು ಮುಂದಿನ ವಾರ ಭೇಟಿಯಾಗಿ ಇದಕ್ಕೆ ತಗಲುವ ಖರ್ಚು ವೆಚ್ಚದ ಬಗ್ಗೆ ಚರ್ಚಿಸುತ್ತೇವೆ’ ಎಂದರು.

‘ಈ ಪೀಠವು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಸದ್ಯಕ್ಕೆ ಸ್ಥಾಪನೆಯಾಗಲಿದ್ದು, ಕ್ರಮೇಣ ಇದು ಶಾಶ್ವತ ಪೀಠ ಆಗುವ ಭರವಸೆ ಇದೆ. ಮುಡಿಪುವಿನಲ್ಲಿ ನಿರ್ಮಾಣವಾಗಿರುವ ಹೊಸ ಕಟ್ಟಡಕ್ಕೆ ನಗರದಲ್ಲಿರುವ ಜಿಲ್ಲಾ ಕಾರಾಗೃಹವು ಸ್ಥಳಾಂತರಗೊಳ್ಳಲಿದೆ. ನಗರದಲ್ಲಿರುವ ಜೈಲಿನ ಸುಮಾರು 12 ಎಕರೆ ಪ್ರದೇಶವನ್ನು ಹೈಕೋರ್ಟ್ನ ಶಾಶ್ವತ ಪೀಠ ಸ್ಥಾಪನೆಗೆ ಬಳಸಿಕೊಳ್ಳಬಹುದು. ಮೂಲ್ಕಿಯಲ್ಲೂ 140 ಎಕರೆ ಸರ್ಕಾರಿ ಜಮೀನು ಲಭ್ಯವಿದೆ. ನಗರದಲ್ಲಿ ಪೀಠ ಸ್ಥಾಪಿಸಲು 10 ಎಕರೆ ಜಮೀನು ಸಾಕಾಗಬಹುದು ಎಂದು ಹೈಕೋರ್ಟ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಸರ್ಕಾರಿ ವಕೀಲರಾದ ಎಂ.ಪಿ.ನೊರೊನ್ಹ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ, ಕಾರ್ಯದರ್ಶಿ ಶ್ರೀಧರ್, ಖಜಾಂಚಿ ಗಿರೀಶ್ ಶೆಟ್ಟಿ, ಸುಜಿತ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-29-1640242456

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.