ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಮೀಡಿಯನ್ ಓಪನಿಂಗ್ ಬಳಿ ಕಾಮಗಾರಿ ನಡೆಸುತ್ತಿರುವ ವೇಳೆ, ಕೆಲಸ ತಡೆದು ಅಡ್ಡಿಪಡಿಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಎನ್ಎಚ್ಎಐ ಯೋಜನಾ ನಿರ್ದೇಶಕರು ಉರ್ವ ಠಾಣೆಗೆ ದೂರು ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಪಿಟಿ ಜಂಕ್ಷನ್ ಮತ್ತು ಕುಂಟಿಕಾನ ಜಂಕ್ಷನ್ ನಡುವಿನ ಕೆ.ಎಸ್.ಅಪಾರ್ಟ್ಮೆಂಟ್ಗೆ ಹೋಗುವ ತಿರುವಿನ ಸಮೀಪದ ವಿಭಜಕದ ಬಳಿಯ ಮೀಡಿಯನ್ ಓಪನಿಂಗ್ ಬಳಿ ಆಗಾಗ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ಈ ಕಾರಣಕ್ಕೆ ಮೀಡಿಯನ್ ಓಪನಿಂಗ್ ಬಂದ್ ಮಾಡುವ ಸಂಬಂಧ ಮುಗ್ರೋಡಿ ಕನ್ಸ್ಟ್ರಕ್ಷನ್ ಕಂಪನಿ ಕಾಮಗಾರಿ ಕೈಗೆತ್ತಿಕೊಂಡಿತ್ತು. ಏ.4ರಂದು ರಾತ್ರಿ ಕಾಮಗಾರಿ ಸ್ಥಳದಲ್ಲಿ ನಿರ್ದೇಶನ ನೀಡುತ್ತಿದ್ದ ವೇಳೆ ಪ್ರಮೋದ್ ಬಳ್ಳಾಲ್ಬಾಗ್, ಉಮೇಶ್ ಶೆಟ್ಟಿ, ಪ್ರವೀಣ್ ಕುಮಾರ್, ಸಂತೋಷ್ ಕುಮಾರ್ ಬಾರೇಬೈಲು ಮತ್ತು ಇತರರು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಲ್ಲದೆ, ಕೆಲಸ ಮಾಡದಂತೆ ಕೆಲಸಗಾರರನ್ನು ತಡೆದು ನಿಲ್ಲಿಸಿದ್ದಾರೆ ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-29-348382658

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.