ಮಂಗಳೂರು: ‘ಜಿಲ್ಲೆಯ ನಾಲ್ಕು ಸರ್ಕಾರಿ ಆಸ್ಪತ್ರೆಗಳ ನಿರ್ವಹಣೆಯನ್ನು ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ಹಸ್ತಾಂತರಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಸಿಪಿಎಂ ನೇತೃತ್ವದಲ್ಲಿ ಮೇ 14ರಂದು ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ತಿಳಿಸಿದರು.

ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳ ಕೈಗೊಪ್ಪಿಸಲು ಸರ್ಕಾರ ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇದು ಆರೋಗ್ಯ ಕ್ಷೇತ್ರವನ್ನು ಖಾಸಗೀಕರಣಗೊಳಿಸಿ, ಬಡವರನ್ನು ಆರೋಗ್ಯ ಸೇವೆಗಳಿಂದ ವಂಚಿತಗೊಳಿಸುವ ಕ್ರಮ’ ಎಂದರು.

ವೈದ್ಯರೂ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಸಿಬ್ಬಂದಿಯನ್ನು ನೇಮಕ ಮಾಡದೆ, ಆಸ್ಪತ್ರೆಗಳನ್ನು ಖಾಸಗಿಯವರ ಕೈಗೊಪ್ಪಿಸಲು ಸರ್ಕಾರವೇ ನೆಲ ಹದಗೊಳಿಸಿದೆ. ‘ಖಾಸಗಿಯವರು ಉತ್ತಮೆ ಸೇವೆ ನೀಡುತ್ತಾರೆ’ ಎಂದು ನೆಪ ಹೇಳಿ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಮೂಡುಬಿದಿರೆ ಆಸ್ಪತ್ರೆಗಳನ್ನು ಖಸಗಿಯವರ ಕೈಗೊಪ್ಪಿಸುವ ಒಪ್ಪಂದ ಅಂತಿಮಗೊಂಡಿದೆ. ಇದನ್ನು ಸಿಪಿಐ ಖಂಡಿಸುತ್ತದೆ. ಆಸ್ಪತ್ರೆಗಳನ್ನು ಸರ್ಕಾರವೇ ನಡೆಸಬೇಕು. ಅದು ಸಾಧ್ಯವಿಲ್ಲದಿದ್ದರೆ ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕು’ ಎಂದು ಮುನೀರ್ ಒತ್ತಾಯಿಸಿದರು.

ಪ್ರತಿಭಟನೆಯ ಅಂಗವಾಗಿ 14ರಂದು ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಜಿಲ್ಲೆಯ ಪ್ರತಿ ಸರ್ಕಾರಿ ಆಸ್ಪತ್ರೆಯ ಮುಂದೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಗುವುದು ಎಂದರು.

ಮುಖಂಡರಾದ ಕೆ. ಯಾದವ ಶೆಟ್ಟಿ, ಸುಕುಮಾರ ತೊಕ್ಕೊಟ್ಟು ಹಾಗೂ ಸುನಿಲ್ಕುಮಾರ್ ಬಜಾಲ್ ಮಾಧ್ಯಮಗೋಷ್ಠಿಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-29-2051382206

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.