ಮಂಗಳೂರು: ಅನಧಿಕೃತವಾಗಿ ಒಂಟೆ, ಜಾನುವಾರುಗಳ ವಧೆ, ಸಾಗಣೆ ಹಾಗೂ ಅನಧಿಕೃತ ಮಾಂಸ ಮಾರಾಟವನ್ನು ತಡೆಗಟ್ಟಲು ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಸೂಚಿಸಿದರು.

ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಜಾನುವಾರು ಸಾಗಣೆಯನ್ನು ತಡೆಗಟ್ಟುವ ಕುರಿತು ಮಂಗಳವಾರ ಇಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಜಾನುವಾರು ಸಾಗಣೆ ವೇಳೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪರವಾನಗಿಯನ್ನು ಕಡ್ಡಾಯವಾಗಿ ಪಡೆಯಬೇಕು. ಅನಧಿಕೃತ ಸಾಗಣೆ ತಡೆಗಟ್ಟಲು ಎಲ್ಲ ಚೆಕ್ಪೋಸ್ಟ್ಗಳಲ್ಲಿ ಜಾನುವಾರು ಸಾಗಣೆ ವಾಹನಗಳ ಮೇಲೆ ನಿಗಾ ವಹಿಸಬೇಕು. ಜಾನುವಾರು ಸಾಗಣೆ ಮಾಡುವಾಗ ಪರವಾನಗಿ, ಜಾನುವಾರು ಮಾಲೀಕರ ವಿವರ, ಖರೀದಿಸಿದ ಮಾಲೀಕರ ವಿವರ, ವಾಹನ ದಾಖಲಾತಿ, ಚಾಲಕರ ವಿವರ ಸೇರಿದಂತೆ ಎಲ್ಲ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ. ಈ ದಾಖಲಾತಿಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದರು.

ಯಾವುದೇ ಕಟ್ಟಡದಲ್ಲಿ ಅನಧಿಕೃತವಾಗಿ ಪ್ರಾಣಿ ವಧೆ ಮಾಡಿದ್ದು ಕಂಡುಬಂದಲ್ಲಿ ಅಂತಹ ಕಟ್ಟಡಗಳನ್ನು ನಿಯಮಾನುಸಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಅಕ್ರಮವಾಗಿ ಜಾನುವಾರು ಸಾಗಣೆ ಮತ್ತು ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಲಾಗಿದ್ದು, ಸಮಿತಿ ಸದಸ್ಯರು ನಿಗಾ ವಹಿಸಬೇಕು. ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಮುಖ್ಯ ಪಶುಸಂಗೋಪನಾ ಅಧಿಕಾರಿ ಡಾ.ಅಶೋಕ್ ಕೆ.ಆರ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-29-132090923

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.