ಮಂಗಳೂರು: ಕಡಬ ಠಾಣೆ ವ್ಯಾಪ್ತಿಯ ಐತೂರು ಗ್ರಾಮದ ಕೆರ್ಮಾಯಿಯ ಮನೆಯೊಂದರಲ್ಲಿ ಮತಾಂತರ ಮತ್ತು ಅನೈತಿಕ ಚಟುವಟಿಕೆ ನಡೆಯುತ್ತಿರುವ ಸಾಧ್ಯತೆ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ವಿಚಾರಣೆ ನಡೆಸಲಾಗಿದ್ದು, ಯಾವುದೇ ರೀತಿಯ ಅನೈತಿಕ ಚಟುವಟಿಕೆಯಾಗಲಿ, ಬಲವಂತದ ಮತಾಂತರವಾಗಲಿ ನಡೆದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

‘ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ, ನಾಲ್ಕು ಕುಟುಂಬಗಳಿಗೆ ಸೇರಿದ ಗಂಡಸರು, ಹೆಂಗಸರು, ಮಕ್ಕಳು ಸೇರಿ 23 ಜನರು ಅಲ್ಲಿದ್ದರು. ಅವರೆಲ್ಲರೂ ಬೆಂಗಳೂರಿನವರಾಗಿದ್ದು, ಪ್ರವಾಸದ ನಿಮಿತ್ತ ಮಂಗಳೂರಿಗೆ ಬಂದಿರುವುದಾಗಿ ತಿಳಿಸಿದ್ದಾರೆ. ಹಲವು ವರ್ಷಗಳಿಂದ ಪರಿಚಯ ಇರುವ ಬೆಂಗಳೂರಿನ ಫಾದರ್ ಒಬ್ಬರ ತಮ್ಮ ಮನೆಯಲ್ಲಿ ತಂಗಿರುವುದಾಗಿ ಮತ್ತು ಸುಮಾರು 15 –20 ವರ್ಷಗಳಿಂದ ಕ್ರಿಶ್ಚಿಯನ್ ಧರ್ಮವನ್ನು ಸ್ವಯಂಪ್ರೇರಿತವಾಗಿ ಪಾಲಿಸಿಕೊಂಡು ಬರುತ್ತಿರುವುದಾಗಿ ಅವರು ಹೇಳಿದ್ದಾರೆ’ ಎಂದು, ಮಾಧ್ಯಮಗಳಿಗೆ ನೀಡಿದ ಮಾಹಿತಿಯಲ್ಲಿ ಎಸ್ಪಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-29-2056551861

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.