ಮಂಗಳೂರು: ‘ಕನ್ನಡ ನಾಡು ನುಡಿಗೆ ಶ್ರಮಿಸುತ್ತಿರುವ ಸಾವಿತ್ರಿ ರಾವ್, ಬಿ. ಶ್ರೀನಿವಾಸ ರಾವ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮತ್ತು ಇತರ ಸಂಘಟನೆಗಳ ಮೂಲಕ ಗೌರವಿಸಿರುವುದು ಶ್ಲಾಘನೀಯ ಕಾರ್ಯ’ ಎಂದು ಕಸಾಪ ಮಂಗಳೂರು ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ ರೇವಣ್ಕರ್ ಹೇಳಿದರು.

ತಾಲ್ಲೂಕು ಘಟಕದ ಹಿರಿಯ ಸಂಘಟಕರ ಮನೆ ಭೇಟಿ ಕಾರ್ಯಕ್ರಮದಡಿ ದಂಪತಿಯನ್ನು ಸನ್ಮಾನಿಸಲಾಯಿತು.

ಇಂಥ ಸಾಧಕರನ್ನು ಮಕ್ಕಳಿಗೆ ಪರಿಚಯಿಸಿ, ಪ್ರೇರಣೆ ನೀಡಬೇಕಾಗಿದೆ ಎಂದು ತಿಳಿಸಿದರು.

ಗೌರವ ಕಾರ್ಯದರ್ಶಿ ಡಾ. ಮುರಲೀಮೋಹನ್ ಚೂಂತಾರು ಮಾತನಾಡಿ, ಸಾವಿತ್ರಿ ರಾವ್ ಹಾಗೂ ಶ್ರೀನಿವಾಸ ರಾವ್ ಮಕ್ಕಳ ಸಾಹಿತ್ಯ ಸಂಗಮವನ್ನು ಕಟ್ಟಿ ಬೆಳೆಸಿದ ರೀತಿ ಮಾದರಿ. ಅವರ ಸಂಪನ್ಮೂಲ ಮತ್ತು ಸಾಧನೆಯ ಹಾದಿ ಅನುಕರಣೀಯ ಎಂದರು.

ಜಿಲ್ಲಾ ಸಮಿತಿಯ ಅರುಣಾ ನಾಗರಾಜ್ ಸನ್ಮಾನಿತರನ್ನು ಪರಿಚಯಿಸಿದರು.

ಬಿ.ಶ್ರೀನಿವಾಸ ರಾವ್ ಮಾತನಾಡಿ, ಇಂದಿನ ಕನ್ನಡ ಶಾಲೆಗಳು ದುಃಸ್ಥಿತಿಯಲ್ಲಿದ್ದು, ಸರ್ಕಾರ ಕೂಡಲೇ ಒಂದು ತರಗತಿಗೆ ಒಬ್ಬ ಶಿಕ್ಷಕರನ್ನು ನೇಮಿಸಬೇಕು ಎಂದು ಆಗ್ರಹಿಸಿದರು. ಸಾವಿತ್ರಿ ರಾವ್ ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು.

ಕೋಶಾಧಿಕಾರಿ ಎನ್.ಸುಬ್ರಾಯ ಭಟ್ ನಿರೂಪಿಸಿದರು. ಸಮಿತಿಯ ರವೀಂದ್ರನಾಥ್ ಕೆ.ಪಿ., ಅನಂತ ಪದ್ಮನಾಭ ರಾವ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-29-1566466570

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.