ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಪ್ರದೇಶವು ಕೆಲ ದಿನಗಳಿಂದ ವಾಹನ ಅಪಘಾತಗಳಿಗೆ ಸುದ್ದಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಮಂಗಳವಾರ ಬನ್ನಡ್ಕ ಹಾಗೂ ಹೆದ್ದಾರಿ ಹಾದು ಹೋಗುವ ವಿವಿಧ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು.

ಮಂಗಳೂರು ಡಿಸಿಪಿ ರವಿಶಂಕರ್ ಕೆ., ಎಸಿಪಿ ಶ್ರೀಕಾಂತ್, ಮೂಡುಬಿದಿರೆ ತಹಶೀಲ್ದಾರ್ ಶ್ರೀಧರ ಮುಂದಲಮನಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಮಂಗಳೂರು ಬಿಕರ್ನಕಟ್ಟೆಯಿಂದ ಕಾರ್ಕಳದ ಸಾಣೂರಿನವರೆಗ ಇರುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸಂಭವಿಸುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ, ಕುಡುಪು ಕಟ್ಟೆಯಿಂದ ಬಾರಾಡಿ ಕ್ರಾಸ್ ಕಾರ್ಕಳ ಗಡಿ ತನಕ ಸುಮಾರು 35 ಕಿ.ಮೀ. ವ್ಯಾಪ್ತಿಯ ಹೊಸ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಜಂಟಿ ಪರಿಶೀಲನೆ ನಡೆಸಲಾಯಿತು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಸ್ಥಳೀಯ ಕಾನೂನು ಮತ್ತು ಸಂಚಾರ ಪೊಲೀಸ್ ಅಧಿಕಾರಿಗಳು, ಪಿಡಬ್ಲ್ಯುಡಿ ಅಧಿಕಾರಿಗಳು, ಆದಾಯ ಇಲಾಖೆ, ಪಿಡಿಒ, ಮೂಡುಬಿದಿರೆ ತಹಶೀಲ್ದಾರ್, ಮಂಗಳೂರು ಉಪ ತಹಶೀಲ್ದಾರ್, ದಿಲೀಪ್ ಬಿಲ್ಟ್ಕಾನ್ ಲಿಮಿಟೆಡ್ ಕಂಪನಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಅಪಘಾತ ಸಂಭವಿಸುವ ಸಾಧ್ಯತೆಯಿರುವ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ವಾಹನ ಸವಾರರು, ಸ್ಥಳೀಯ ನಿವಾಸಿಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ, ರಸ್ತೆ ಸುರಕ್ಷತೆ ಹೆಚ್ಚಿಸಲು ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಲಾಯಿತು. ಸಂಬಂಧಿತ ಇಲಾಖೆಗಳು ಸಮಸ್ಯೆಗಳ ಕುರಿತು ಕ್ರಮ ಕೈಗೊಳ್ಳುವುದಾಗಿ ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-29-93233034

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.