ಮಂಗಳೂರು: ಆಟೊರಿಕ್ಷಾ ಚಾಲಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ ಆಟೊಚಾಲಕ ಪುರುಷೋತ್ತಮ ಪೂಜಾರಿ ಹಾಗೂ ಆರು ಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಹಂಪನಕಟ್ಟೆ ಸಮೀಪದ ರಿಕ್ಷಾ ನಿಲ್ದಾಣದ ಬಳಿ ಶುಕ್ರವಾರ ಕಾರ್ಮಿಕ ದಿನ ಆಚರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಪರಿಷತ್, ಬಸ್ ನೌಕರರ ಸಂಘ ಹಾಗೂ ಆಟೊರಿಕ್ಷಾ ಚಾಲಕ, ಮಾಲೀಕರ ಸಂಘದ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಪಿ ರವಿಶಂಕರ್ ಅವರು ಸಂಚಾರ ನಿಯಮಗಳ ಕುರಿತು, ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೊ ಅವರು ಕಾರ್ಮಿಕರಿಗೆ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ರಿಕ್ಷಾ ಚಾಲಕರಿಗೆ ಸಮವಸ್ತ್ರ, ನೋಂದಾಯಿತ ಆಟೊರಿಕ್ಷಾ ಚಾಲಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಯಿತು.

ಐವನ್ ಡಿಸೋಜ ಮಾತನಾಡಿ, ರಿಕ್ಷಾ ಚಾಲಕರಿಗೆ ವಿಮಾ ಯೋಜನೆ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. 60 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ನಿವೃತ್ತಿ ವೇತನ, ಪ್ರಸ್ತುತ ನೀಡುತ್ತಿರುವ ₹3 ಸಾವಿರ ಮಾಸಿಕ ಪಿಂಚಣಿಯನ್ನು ಹೆಚ್ಚಿಸಬೇಕು ಎಂದರು. ರಿಕ್ಷಾ ಚಾಲಕರು ಹಾಗೂ ವಿವಿಧ ಅಸಂಘಟಿತ ಕಾರ್ಮಿಕರಿಗೂ ಈ ಯೋಜನೆ ವಿಸ್ತರಿಸುವ ಕುರಿತು ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದರು.

ಪ್ರಮುಖರಾದ ಶಶಿಧರ್ ಹೆಗ್ಡೆ, ನಾಗೇಂದ್ರ ಕುಮಾರ್, ಭಾಸ್ಕರ್ ರಾವ್, ಸತೀಶ್ ಪೆಂಗಲ್, ಅಬ್ಬಾಸ್ ಅಲಿ, ವಸಂತ ಶೆಟ್ಟಿ, ಪಿಯೂಷ್ ಮೊಂತೆರೊ, ಚಂದ್ರಹಾಸ ಪೂಜಾರಿ, ವೆಲೆನ್ಸಿಯಾ ತಾಜ್ ಮಹಲ್ ಹೋಟೆಲ್ ಮಾಲೀಕ ರಾಮನಾಥ್ ಶೆಣೈ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-29-1299613609

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.