ಮಂಗಳೂರು: ನಗರದ ಲೇಡಿಗೋಶನ್ ಆಸ್ಪತ್ರೆಗೆ ಪವರ್ ಗ್ರಿಡ್ ಕಾರ್ಪೊರೇಷನ್ ಇಂಡಿಯಾ ತನ್ನ ಸಿಎಸ್ಆರ್ ನಿಧಿಯಡಿ ನೀಡಿದ ₹68.80 ಲಕ್ಷ ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಹಸ್ತಾಂತರಿಸಿದರು.

ನಂತರ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು ಇಡೀ ರಾಜ್ಯಕ್ಕೆ ವೈದ್ಯಕೀಯ ಸೇವೆ ನೀಡುತ್ತಿವೆ. ಹಲವು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ. ಲೇಡಿಗೋಶನ್ ಆಸ್ಪತ್ರೆಯಲ್ಲಿ ತಿಂಗಳಿಗೆ 500– 600 ಹೆರಿಗೆಗಳು ಆಗುತ್ತವೆ. ವೆನ್ಲಾಕ್ ಆಸ್ಪತ್ರೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ₹70 ಲಕ್ಷ ವೆಚ್ಚದಲ್ಲಿ ಒಪಿಡಿ ನಿರ್ಮಾಣವಾಗುತ್ತಿದೆ. ಆಸ್ಪತ್ರೆ ಕಟ್ಟಡಗಳ ನಡುವೆ ಲಿಂಕ್ ಸೇತುವೆ ನಿರ್ಮಾಣ ಆಗಬೇಕಾಗಿದೆ. ವೆನ್ಲಾಕ್ ಆಸ್ಪತ್ರೆಯ 1 ಲಕ್ಷ ಚದರ ಅಡಿ ಜಾಗದಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೆಎಂಸಿ ಆಸ್ಪತ್ರೆ ಮಾಡಲಿದೆ ಎಂದರು.

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಡಿಎಚ್ಒ ಡಾ. ತಿಮ್ಮಯ್ಯ, ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಿವಪ್ರಕಾಶ್, ಕೆಎಂಸಿ ಮಂಗಳೂರಿನ ಡೀನ್ ಡಾ. ಉನ್ನಿಕೃಷ್ಣನ್ ಉಪಸ್ಥಿತರಿದ್ದರು. ಪವರ್ ಗ್ರಿಡ್ ಕಾರ್ಪೊರೇಷನ್ನ ಅಧಿಕಾರಿ ಗಣೇಶನ್ ಡಿ. ಅವರನ್ನು ಸನ್ಮಾನಿಸಲಾಯಿತು. ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ. ಆರ್ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-29-1568184791

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.