ಮಂಗಳೂರು: ಕರಾವಳಿಯ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲೊಂದಾದ ‘ಲ್ಯಾಂಡ್ ಲಿಂಕ್ಸ್’, ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾಭವನಗಳನ್ನು ನಿರ್ಮಿಸಿದ್ದು, ಇವು ಶನಿವಾರ (ಮೇ 23) ಏಕಕಾಲದಲ್ಲಿ ಲೋಕಾರ್ಪಣೆಗೊಳ್ಳಲಿವೆ.

ಮಂಗಳೂರಿನ ಮೇರಿಹಿಲ್ನಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಆಂಧ್ರ ಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರು ನಾಲ್ಕೂ ಸಭಾಂಗಣಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹಾಗೂ ಅನೇಕ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡರು ಹಾಗೂ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

‘ಒಬ್ಬ ಉದ್ಯಮಿ ಯಾ, ಲಾಭದ ದೃಷ್ಟಿಯಿಂದ ಈ ಸಭಾಭವನಗಳನ್ನು ನಿರ್ಮಿಸಿಲ್ಲ. ಬದಲಿಗೆ, ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ರೂಪಿಸಿದ್ದೇನೆ. ಬಡ ಕುಟುಂಬಗಳ ಸಾಮೂಹಿಕ ವಿವಾಹದಂತಹ ಸಂದರ್ಭದಲ್ಲಿ ಹೆತ್ತವರ ಕಣ್ಣಲ್ಲಿ ಕಾಣುವ ಸಾರ್ಥಕತೆ ಮತ್ತು ನೆಮ್ಮದಿಯ ಭಾವವೇ ನನ್ನ ನಿಜವಾದ ಸಂಪತ್ತು’ ಎಂದು ಸಂಸ್ಥೆಯ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ಹೇಳಿದ್ದಾರೆ.

ಸಮಾಜದ ಒಳಿತಿಗಾಗಿ ಆಯೋಜಿಸುವ ಸಾಮೂಹಿಕ ವಿವಾಹಗಳು ಹಾಗೂ ಸದುದ್ದೇಶದ ಸಾರ್ವಜನಿಕ ಕಾರ್ಯಕ್ರಮಗಳಿಗೆ ಈ ಸಭಾಂಗಣಗಳನ್ನು ನಿಯಮಾನುಸಾರವಾಗಿ ಉಚಿತವಾಗಿ ನೀಡಲು ಸಂಸ್ಥೆ ನಿರ್ಧರಿಸಿದೆ. ಉದ್ಘಾಟನೆಯ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುತ್ತಿರುವ ವಿಕಾಸ್ ಎಜುಕೇಶನ್ ಟ್ರಸ್ಟ್ ವತಿಯಿಂದ ಶೈಕ್ಷಣಿಕ ಸಾಧಕರನ್ನು ಗೌರವಿಸಲಾಗುವುದು.

ಅತ್ಯಾಧುನಿಕ ಸೌಲಭ್ಯ: ಯಾವುದೇ ಕಾರ್ಯಕ್ರಮವನ್ನು ಅತ್ಯಂತ ಆರಾಮದಾಯಕವಾಗಿ ನಡೆಸಲು ಅನುವಾಗುವಂತೆ ನಾಲ್ಕೂ ಸಭಾಭವನಗಳನ್ನು ವಿನ್ಯಾಸಗೊಳಿಸಲಾಗಿದೆ.

ಶನಿವಾರ ಉದ್ಘಾಟನೆಗೊಳ್ಳಲಿರುವ ಮೇರಿಹಿಲ್ನ ಪಾಲೆಮಾರ್ ಕನ್ವೆನ್ಶನ್ ಸೆಂಟರ್ ಅದ್ಧೂರಿತನ ಮತ್ತು ಸಾಂಪ್ರದಾಯಿಕತೆಯ ಸಮ್ಮಿಲನವಾಗಿದೆ. ಮರದ ಕರಕುಶಲತೆ ಹೊಂದಿದ ಭವ್ಯ ಒಳಾಂಗಣ ಇದರ ಪ್ರಮುಖ ಆಕರ್ಷಣೆ. ಮದುವೆ, ಕಾರ್ಪೊರೇಟ್ ಶೈಲಿಯ ಹೈ-ಟೆಕ್ ಕಾರ್ಯಕ್ರಮಗಳಿಗೆ ಸೂಕ್ತ. ಇಲ್ಲಿ ಶೀಘ್ರದಲ್ಲಿಯೇ ಆಕರ್ಷಕ ಒಳಾಂಗಣದ ‘ಗ್ರೀನ್ ವ್ಯಾಲಿ’ ಎಂಬ ತೆರೆದ ಸಭಾಂಗಣವೂ ಸಿದ್ಧವಾಗಲಿದೆ.

ಮೋರ್ಗನ್ಸ್ ಗೇಟ್ನಲ್ಲಿ ನಿರ್ಮಾಣವಾಗಿರುವ ಪಾಲೆಮಾರ್ ಗಾರ್ಡನ್ ಅನ್ನು ಪರಂಪರೆಯ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವಂತೆ ನಿರ್ಮಿಸಲಾಗಿದೆ. ಐಷಾರಾಮದ ಜೊತೆಗೆ ನಿಸರ್ಗ ಸೌಂದರ್ಯ ಸವಿಯಲು ಇಚ್ಛಿಸುವವರಿಗೆ ಇದು ಸೂಕ್ತ. ವೈಭ ಒಳಾಂಗಣ ಸಭಾಂಗಣ, ತೆರೆದ ಸಭಾಂಗಣ, ಸಾಂಪ್ರದಾಯಿಕ ಕಾಟೇಜ್ಗಳು ಮತ್ತು ವಿಶಾಲವಾದ ರೂಮ್ಗಳು, ಸುಂದರವಾದ ಹೊರಾಂಗಣ ಈಜುಕೊಳ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಮತ್ತು ಬೃಹತ್ ಹಸಿರು ಮೈದಾನ ಇದರ ವಿಶೇಷತೆ

ಸುರತ್ಕಲ್ನ ‘ಪಾಲೆಮಾರ್ ಫಾರ್ಮ್ಸ್’ ನಗರ ಪ್ರದೇಶದ ವಾತಾವರಣದಿಂದ ದೂರವಿದ್ದು, ನಿಸರ್ಗದ ಮೌನ, ತಂಪಾದ ಗಾಳಿ, ಮರಗಳ ನೆರಳು ಹಾಗೂ ಪಕ್ಷಿಗಳ ಕಲರವದ ನಡುವೆ ಹಸಿರನ್ನು ಪ್ರೀತಿಸುವವರಿಗಾಗಿ ರೂಪಿಸಲಾಗಿದೆ. 20 ಎಕರೆ ವಿಶಾಲವಾದ ಜಾಗದಲ್ಲಿ ಈ ಫಾರ್ಮ್ಸ್ ಸಿದ್ಧಗೊಂಡಿದೆ.

ಜೆಪ್ಪಿನಮೊಗರು ಕಡೆಕಾರ್ನ ನೇತ್ರಾವತಿ ಸಭಾಭವನವು ನೇತ್ರಾವತಿ ನದಿಯ ದಡದ ಪ್ರಶಾಂತ ಮತ್ತು ಪವಿತ್ರ ವಾತಾವರಣದಲ್ಲಿ ತಲೆಯೆತ್ತಿದೆ. ಒಂದು ಬದಿಯಲ್ಲಿ ನದಿ, ಇನ್ನೊಂದು ಬದಿಯಲ್ಲಿ ಪುರಾತನ ದೇವಸ್ಥಾನವಿದ್ದು, ಇಡೀ ಪರಿಸರಕ್ಕೆ ದೈವಿಕ ಕಳೆ ನೀಡುತ್ತದೆ. ನಾಲ್ಕೂ ಸಭಾಭವನಗಳಲ್ಲಿ ವಿಶಾಲ ಮತ್ತು ವ್ಯವಸ್ಥಿತ ಪಾರ್ಕಿಂಗ್ ಕಲ್ಪಿಸಲಾಗಿದೆ. ನೂರಾರು ವಾಹನಗಳು ಯಾವುದೇ ಗೊಂದಲವಿಲ್ಲದೆ ಬಂದು ಹೋಗಲು ಇಲ್ಲಿ ಅವಕಾಶವಿದೆ.

ಯಾವುದೇ ಧರ್ಮ, ಜಾತಿ, ಸಮುದಾಯ ಹಾಗೂ ಎಲ್ಲಾ ಆರ್ಥಿಕ ಹಂತದ ಕುಟುಂಬಗಳಿಗೆ ಇಲ್ಲಿ ಸಮಾನ ಅವಕಾಶ ಮತ್ತು ಸೌಲಭ್ಯಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 7411394759, 7483574759 ಅಥವಾ 9148435759, ಅಥವಾ ಸಂಸ್ಥೆಯ www.palemar.com ವೆಬ್ಸೈಟ್ಗೆ ಭೇಟಿ ನೀಡಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-29-1240305963

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.