ಮಂಗಳೂರು: ನಗರದ ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಧರೆ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಗುತ್ತಿಗೆದಾರ ಉರ್ವ ಅಶೋಕನಗರ ನಿವಾಸಿ ಆ್ಯಂಟನಿ ಮಸ್ಕರೇನ್ಹಸ್ (65) ಎಂಬುವವರು ಮೃತಪಟ್ಟಿದ್ದಾರೆ.

ಲೋಹಿತ್ ನಗರದಲ್ಲಿ ಗುಡ್ಡ ಕುಸಿತವಾಗಿರುವ ಮನೆಯ ಮೇಲ್ಭಾಗದಲ್ಲಿ ಮತ್ತೊಂದು ಮನೆ ಇದ್ದು, ಕಳೆದ ಮಳೆಗಾಲದಲ್ಲಿ ಇಲ್ಲಿ ಮಣ್ಣು ಕುಸಿದಿತ್ತು. ಅಲ್ಲಿ ತಡೆಗೋಡೆ ನಿರ್ಮಿಸಲು ಸಿದ್ಧತೆ ನಡೆಸಲಾಗಿತ್ತು. ಈ ತಡೆಗೋಡೆ ನಿರ್ಮಾಣಕ್ಕೆ ಆ್ಯಂಟನಿ ಅವರು ನಾಲ್ವರು ಕಾರ್ಮಿಕರೊಂದಿಗೆ ಪರಿಶೀಲಿಸುತ್ತಿದ್ದಾಗ, ಏಕಾಏಕಿ ಧರೆ ಕುಸಿದಿದೆ. ಪರಿಣಾಮ ಆ್ಯಂಟನಿ ಮಣ್ಣಿನಡಿ ಸಿಲುಕಿದ್ದರು. ಜತೆಗಿದ್ದ ಕೆಲಸಗಾರು ಓಡಿಬಂದು ಅಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆ್ಯಂಟನಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-29-1963203127

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.