ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು.ಕೆ ಅಧ್ಯಕ್ಷತೆಯಲ್ಲಿ ಗುರುವಾರ ಇಲ್ಲಿ ನಡೆಯಿತು.

ಮಿಷನ್ ಶಕ್ತಿ ಯೋಜನೆಯಲ್ಲಿ ಜಿಲ್ಲೆಯ ಸಖಿ ಒನ್ ಸ್ಟಾಪ್ ಕರ್ನಾಟಕದಲ್ಲಿ ಮೊದಲನೇ ಸ್ಥಾನದಲ್ಲಿದ್ದು, ರಾಷ್ಟ್ರದ 966 ಸಖಿ ಕೇಂದ್ರಗಳ ಪೈಕಿ 7ನೇ ಸ್ಥಾನ ಪಡೆದಿರುವುದಕ್ಕೆ ಅಭಿನಂದಿಸಲಾಯಿತು.

ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಲ್ಲಿ ಗರ್ಭಿಣಿಯರಿಗೆ ಸಂಪೂರ್ಣ ಸೌಲಭ್ಯ ನೀಡಿದ್ದು, ಎರಡನೇ ಹೆಣ್ಣು ಮಗು ಜನಿಸಿದ ಎಲ್ಲ ಅರ್ಹ ತಾಯಂದಿರಿಗೆ ಸೌಲಭ್ಯ ದೊರೆಯುವಂತೆ ಕ್ರಮ ವಹಿಸಲು ಸೂಚಿಸಲಾಯಿತು.

ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ದಾಖಲಾಗಬೇಕು. ಜಿಲ್ಲೆಯ 52 ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಂ ಕ್ರಷ್ ಕೇಂದ್ರ ಆರಂಭಿಸಲಿದ್ದು, ಇಲ್ಲಿ 6 ತಿಂಗಳಿಂದ 3 ವರ್ಷದ ಮಕ್ಕಳನ್ನು ದಾಖಲು ಮಾಡಲಾಗುತ್ತದೆ. ಹೆಚ್ಚುವರಿ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ರಾಜು ಕೆ. ಹೇಳಿದರು.

ಪುತ್ತೂರು ಮತ್ತು ಬಂಟ್ವಾಳ ತಾಲ್ಲೂಕು ಸಾಂತ್ವನ ಕೇಂದ್ರಗಳ ಮೂಲಕ ‘ಸಮುದಾಯದತ್ತ ಸಾಂತ್ವನ’ ಎಂಬ ವಿಶಿಷ್ಟ ಕಾರ್ಯಕ್ರಮ ನಡೆಯುತ್ತಿದ್ದು, ಜಿಲ್ಲೆಯ ಎಲ್ಲ ಸಾಂತ್ವನ ಕೇಂದ್ರಗಳು ಇಲಾಖೆಯ ಮೂಲಕ ಇಂತಹ ಕಾರ್ಯಕ್ರಮ ನಡೆಸಬೇಕು ಎಂದು ಸೂಚಿಸಿದರು. ಡಿಎಚ್ಒ ಡಾ. ಎಚ್.ಆರ್. ತಿಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಉಸ್ಮಾನ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-29-1832642862

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.