ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಮಂಗಳೂರು: ಕಸಾಯಿಖಾನೆ, ಮಾಂಸದ ಅಂಗಡಿ ಪರಿಶೀಲಿಸಿದ‌ ಮೇಯರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಂಸದ ಅಂಗಡಿಯ ಸಂಗ್ರಹ ಕೇಂದ್ರದಲ್ಲಿ ಪರಿಶೀಲನೆ ನಡೆಸಿದ ಮಂಗಳೂರು ಮೇಯರ್‌ ಮತ್ತು ತಂಡ

ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುವ ವಾಹನಗಳನ್ನು ಪೊಲೀಸರು ಹಿಡಿದಿರುವುದು ಹಾಗೂ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಮೇಯರ್ ದಿವಾಕರ ಪಾಂಡೇಶ್ವರ ನೇತೃತ್ವದಲ್ಲಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ನಗರದ ವಿವಿಧ ಮಾರುಕಟ್ಟೆಗಳಿಗೆ ತೆರಳಿ ಪರಿಶೀಲಿಸಿದರು.

ಉರ್ವಸ್ಟೋರ್, ಉರ್ವ ಮಾರ್ಕೆಟ್‌ಗಳಲ್ಲಿ ಕಸಾಯಿಖಾನೆ, ಮಾಂಸದ ಅಂಗಡಿಗಳನ್ನು ಪರಿಶೀಲಿಸಲಾಯಿತು. ಅಕ್ರಮವಾಗಿ ಮಾರಾಟ ಕಂಡುಬಂದಲ್ಲಿ ಪರವಾನಗಿ ರದ್ದು ಮಾಡುವ ಎಚ್ಚರಿಕೆ ನೀಡಲಾಗಿದೆ.

ಸ್ಥಾಯಿ ಸಮಿತಿ ಅಧ್ಯಕ್ಷರಾದ ಪೂರ್ಣಿಮಾ, ಕಿರಣ್ ಕುಮಾರ್, ಪಾಲಿಕೆ ಸದ್ಯಸರಾದ ಸುಧೀರ್ ಶೆಟ್ಟಿ ಹಾಗೂ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು