ಮಂಗಳೂರು: ಬೆಂಗಳೂರಿನಿಂದ ಮಾದಕವಸ್ತು ಎಂಡಿಎಂಎ ತಂದು ಉಳ್ಳಾಲ ತಾಲ್ಲೂಕಿನ ತಲಪಾಡಿ ಸುತ್ತಮುತ್ತ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಮಂಗಳೂರಿನ ಸಿಸಿಬಿ ಪೊಲೀಸರು, ₹11.90 ಲಕ್ಷ ಮೌಲ್ಯದ 118.13 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಉಳ್ಳಾಲ ಬಸ್ತಿಪಡ್ಪುವಿನ ಮುಸ್ತಫಾ ಸೀದಿಯಬ್ಬ (34), ಮಾಸ್ತಿಕಟ್ಟೆ ಜಂಕ್ಷನ್ ನಿವಾಸಿ ಮೈಯದ್ದಿ (28), ಮುಕ್ಕಚೇರಿಯ ಮೊಹಮ್ಮದ್ ಶಿಫಾನ್ (28) ಬಂಧಿತ ಆರೋಪಿಗಳು.

‘ಆರೋಪಿಗಳು ಬೆಂಗಳೂರಿನಿಂದ ಮಾದಕ ವಸ್ತು ಖರೀದಿಸಿ ತಂದು ತಲಪಾಡಿ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ನಿಷೇಧಿತ ಎಂಡಿಎಂಎ, ನಾಲ್ಕು ಮೊಬೈಲ್ ಫೋನ್ಗಳು, ಸ್ವಿಫ್ಟ್ ಕಾರನ್ನು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಬಂಧಿತ ಮುಸ್ತಫಾ ಸೀದಿಯಬ್ಬನ ಮೇಲೆ ಈ ಹಿಂದೆ ಕಂಕನಾಡಿ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಮೇಲೆ ಉಳ್ಳಾಲ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಸಾಗಣೆ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.