ಮಂಗಳೂರು: ರಾಜ್ಯ ಸರ್ಕಾರ ಪ್ರಕಟಿಸಿದ ಕನಿಷ್ಠ ಕೂಲಿ ಜಾರಿಗೊಳಿಸಬೇಕು, ಗೋಡಂಬಿ ಹಾಗೂ ಸ್ಕೀಮ್ ಕಾರ್ಮಿಕರನ್ನು ಕನಿಷ್ಠ ಕೂಲಿ ವ್ಯಾಪ್ತಿಗೆ ತರಬೇಕು ಎಂದು ಒತ್ತಾಯಿಸಿ, ಸಿಐಟಿಯು ನೇತೃತ್ವದಲ್ಲಿ ನಗರದ ನಾಗುರಿ ಜಂಕ್ಷನ್ನಲ್ಲಿ ಪ್ರತಿಭಟನೆ ನಡೆಯಿತು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಭಟ್ ಮಾತನಾಡಿ, ರಾಜ್ಯ ಸರ್ಕಾರವು ಕನಿಷ್ಠ ವೇತನವನ್ನು ಮೇ 22ರಂದು ಪರಿಷ್ಕರಿಸಿದ್ದರೂ ಪ್ರತಿ ಉದ್ದಿಮೆಗೆ ಪ್ರತ್ಯೇಕವಾಗಿ ಕನಿಷ್ಠ ವೇತನ ನಿಗದಿ ಮಾಡದೆ, ಬಹುತೇಕ ಉದ್ದಿಮೆಗಳಿಗೆ ಏಕರೂಪವಾಗಿ ಮಾಡಿರುವುದು ಸರಿಯಲ್ಲ. ವಾಸ್ತವ ಪರಿಸ್ಥಿತಿಯನ್ನು ಹಾಗೂ ಬೆಲೆಯೇರಿಕೆಯನ್ನು ಗಮನದಲ್ಲಿಟ್ಟು ಸುಪ್ರೀಂ ಕೋರ್ಟ್ ತೀರ್ಪಿನ ಮಾನದಂಡಗಳನ್ನು ಆಧರಿಸಿ ರಾಜ್ಯದಲ್ಲಿ ಕನಿಷ್ಠ ವೇತನ ಪರಿಷ್ಕರಿಸಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಆದರೆ, ರಾಜ್ಯ ಸರ್ಕಾರ ಅದನ್ನು ಸಂಪೂರ್ಣ ನಿರ್ಲಕ್ಷಿಸಿದೆ ಎಂದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ದೇಶದ ಕಾರ್ಮಿಕರು ಬೆವರು ಬಸಿದು ರಚಿಸಿದ ಕಾರ್ಮಿಕ ಕಾನೂನುಗಳನ್ನು ಕೇಂದ್ರ ಸರ್ಕಾರ ಏಕಾಏಕಿಯಾಗಿ ರದ್ದುಗೊಳಿಸಿ ಸಂಹಿತೆಗಳನ್ನಾಗಿ ರೂಪಿಸಿದ್ದು, ಕಾರ್ಮಿಕ ವಿರೋಧಿ ನೀತಿಯಾಗಿದೆ. ಅವು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದ್ದು, ನವ ಗುಲಾಮಗಿರಿಗೆ ದೂಡುವ ಕೇಂದ್ರ ಸರ್ಕಾರದ ಹುನ್ನಾರ ಬಯಲಿಗೆಳೆಯಲು ಹೋರಾಟ ನಡೆಸಬೇಕಾಗಿದೆ ಎಂದರು.

ವಸಂತ ಆಚಾರಿ, ಜೆ ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೊಟ್ಟು, ಜಯಂತಿ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಕೃಷ್ಣಪ್ಪ ಸಾಲ್ಯಾನ್, ಸದಾಶಿವ ದಾಸ್, ಸಂತೋಷ್ ಬಜಾಲ್, ರಿಜ್ವಾನ್ ಹರೇಕಳ, ಜಗದೀಶ್ ಬಜಾಲ್, ಅಭಿಷೇಕ್ ಬೆಳ್ತಂಗಡಿ, ವಿನುಷ ರಮಣ, ಪದ್ಮಾವತಿ ಶೆಟ್ಟಿ, ಸುಂದರ ಕುಂಪಲ, ರೋಹಿದಾಸ್, ರವಿಚಂದ್ರ ಕೊಂಚಾಡಿ, ನೋಣಯ್ಯ ಗೌಡ, ವಸಂತಿ ಕುಪ್ಪೆಪದವು, ರಾಧಾ ಮೂಡುಬಿದಿರೆ, ಈಶ್ವರಿ ಪದ್ಮುಂಜ, ಜಯಂತ ನಾಯಕ್, ಪ್ರಮೋದಿನಿ ಇದ್ದರು.

ಜಿಲ್ಲಾಧಿಕಾರಿ ಕಚೇರಿ ಚಲೋ ಭಾಗವಾಗಿ, ಜಿಲ್ಲಾಧಿಕಾರಿ ಕಚೇರಿಯತತ ಹೆಜ್ಜೆ ಹಾಕುವಷ್ಟರಲ್ಲಿ ಪ್ರತಿಭಟನಕಾರರು ತಡೆದು, ಬಂಧಿಸಲಾಯಿತು. ನಂತರ ನಿಯೋಗದಲ್ಲಿ ತೆರಳಿ ಮನವಿ ಸಲ್ಲಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-29-894530286

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.