ಮಂಗಳೂರು: ಸದ್ಯದಲ್ಲಿ ಮುಂಗಾರು ಪ್ರಾರಂಭವಾಗಲಿರುವುದರಿಂದ ಮಣ್ಣು ಕುಸಿತ, ಗುಡ್ಡ ಕುಸಿತ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಪ್ರಾಣ ಹಾನಿಯಾಗುವುದನ್ನು ತಡೆಗಟ್ಟಲು ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ಯಾವುದೇ ರೀತಿಯ ರಸ್ತೆ ಅಗೆತ, ಗುಡ್ಡ ಅಗೆತ ಹಾಗೂ ಮಣ್ಣು ಅಗೆತದ ಕಾಮಗಾರಿ ನಡೆಸದಂತೆ ಮಹಾನಗರ ಪಾಲಿಕೆ ಸೂಚನೆ ನೀಡಿದೆ.

ಈ ಅವಧಿಯಲ್ಲಿ ಮಣ್ಣು ಸಾಗಣೆ ಮಾಡುವುದನ್ನು ನಿಷೇಧಿಸಲಾಗಿದೆ. ಈಗಾಗಲೇ ಪಾಲಿಕೆಯಿಂದ ಪರವಾನಗಿ ಪಡೆದು ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಿದ್ದಲ್ಲಿ ಕಾಮಗಾರಿಯ ಸ್ಥಳದಲ್ಲಿ ಅಕ್ಕಪಕ್ಕದ ಆಸ್ತಿಗಳಿಗೆ ಹಾನಿಯಾಗದ ರೀತಿಯಲ್ಲಿ, ಬ್ಯಾಕ್ ಫಿಲ್ಲಿಂಗ್ ಕಾಮಗಾರಿ ನಿರ್ವಹಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅನಾಹುತ ಸಂಭವಿಸಿ ಆಸ್ತಿಪಾಸ್ತಿ ಹಾನಿ ಅಥವಾ ಪ್ರಾಣ ಹಾನಿಯಾದರೆ ಮಾಲೀಕರು ಹಾಗೂ ಸಂಬಂಧಪಟ್ಟ ಎಂಜಿನಿಯರ್ ಅನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-28-809411712

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.