ಮೂಡುಬಿದಿರೆ: ಮಂಗಳೂರು- ಮೂಡುಬಿದಿರೆ ಮಾರ್ಗವಾಗಿ ಕಾರ್ಕಳಕ್ಕೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ನಿರ್ಮಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬನ್ನಡ್ಕ ಪರಿಸರದಲ್ಲಿ ಹೆದ್ದಾರಿ ಕಾಮಗಾರಿ ಆರಂಭವಾದ ನಂತರ ಆಗಾಗ ಅಪಘಾತ ಸಂಭವಿಸಿ ಸಾವು ನೋವು ಉಂಟಾಗಿದೆ. ಈ ಬಗ್ಗೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಇಲ್ಲಿ ಸರ್ವಿಸ್ ರಸ್ತೆ ಮತ್ತು ಮೇಲ್ಸೇತುವೆ ನಿರ್ಮಾಣ ಆಗದಿರುವುದು ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದರು. ಸ್ಥಳೀಯ ನಾಗರಿಕರ ನಿಯೋಗ ಸಂಸದರನ್ನು ಭೇಟಿಯಾಗಿ ಮನವಿ ಸಲ್ಲಿಸಿತ್ತು. ಮನವಿಗೆ ಸ್ಪಂದಿಸಿದ ಸಂಸದ, ಬನ್ನಡ್ಕದಲ್ಲಿ ಸರ್ವಿಸ್ ರಸ್ತೆಯ ಅಗತ್ಯ ಇರುವುದರಿಂದ ಎರಡೂ ಕಡೆ ಸುಮಾರು 640 ಮೀಟರ್ ಸರ್ವಿಸ್ ರಸ್ತೆ ನಿರ್ಮಿಸಿಕೊಡುವಂತೆ ಹೆದ್ದಾರಿ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಮನವಿ ಪ್ರತಿಯನ್ನು ಹೆದ್ದಾರಿ ಪ್ರಾಧಿಕಾರದ ಕರ್ನಾಟಕ ಪ್ರಾದೇಶಿಕ ಅಧಿಕಾರಿ ವಿಲಾಸ್ ಪಿ. ಬ್ರಹ್ಮಾಂಕರ್ ಅವರಿಗೂ ಕಳುಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-29-447540875

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.