ಮಂಗಳೂರು: ‘ಪ್ರಶ್ನೆಗಳ ಸೋರಿಕೆ ಕಾರಣಕ್ಕೆ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ರದ್ದುಪಡಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು’ ಎಂದು ಕೆಪಿಸಿಸಿಯ ಯುವ ಕಾಂಗ್ರೆಸ್ ಕಾನೂನು ಘಟಕದ ವಕ್ತಾರ ಅಭಿಷೇಕ್ ಉಳ್ಳಾಲ್ ಒತ್ತಾಯಿಸಿದರು.

ಈ ಕುರಿತು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಬೀಡಿ ಕಟ್ಟುವವರು, ರಿಕ್ಷಾ ಚಾಲಕರು, ತರಕಾರಿ ಮಾರುವವರು, ಬಸ್ ಚಾಲಕರು ಮೊದಲಾದವರು ತಾವು ಹೊಟ್ಟೆ ಬಟ್ಟೆ ಕಟ್ಟಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಲು ಶ್ರಮಿಸುತ್ತಾರೆ. ಅಂತಹ ಕುಟುಂಬಗಳೇ ಭವಿಷ್ಯದ ಆಧಾರಸ್ತಂಬಗಳನ್ನೇ ಕಳೆದುಕೊಂಡಿವೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

‘ಕ್ಷುಲ್ಲಕ ವಿಚಾರಗಳಿಗೆ ಪ್ರತಿಭಟನೆ ನಡೆಸುವ ಅಭಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೀಟ್ ಪ್ರಶ್ನೆ ಸೋರಿಕೆಯಿಂದಾಗಿ ನಾಲ್ಕಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರೂ ತುಟಿಬಿಚ್ಚಿಲ್ಲ. ರಾಜಸ್ಥಾನದ ಬಿಜೆಪಿ ಯುವ ಮೋರ್ಚಾದ ದಿನೇಶ್ ಎಂಬಾತ ₹15 ಲಕ್ಷ ಹಣ ಪಡೆದು ಪ್ರಶ್ನೆ ಸೋರಿಕೆ ಮಾಡಿರುವ ಆರೋಪ ಹೊತ್ತಿದ್ದಾನೆ. ಬಿಜೆಪಿ ನಾಯಕರೂ ಈ ಬಗ್ಗೆ ಮೌನಕ್ಕೆ ಶರಣಾಗಿದ್ದಾರೆ’ ಎಂದರು.

‘ಹತ್ತು ವರ್ಷಗಳಲ್ಲಿ ಐದು ಸಲ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ. ಈ ಸಾಲಿನಲ್ಲಿ 22.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟ ಆಡಿದೆ. 2014 ಕ್ಕಿಂತ ಮುಂಚೆ ಆಯಾ ರಾಜ್ಯಗಳೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿ ಸೀಟು ಹಂಚಿಕೆ ಮಾಡುತ್ತಿದ್ದವು. ಆಗ ಇಂತಹ ಗೊಂದಲಗಳು ಇರಲಿಲ್ಲ. ಹಾಗಾಗಿ ಮೊದಲಿನಂತೆ ರಾಜ್ಯಗಳೇ ಸಿಇಟಿ ನಡೆಸಿ ಸೀಟು ಹಂಚಿಕೆ ನಡೆಸುವಂತಾಗಬೇಕು’ ಎಂದು ಒತ್ತಾಯಿಸಿದರು.

ಟ್ಯುಟೋರಿಯಲ್ಗಳು ಅಲ್ಲಲ್ಲಿ ಹುಟ್ಟಿಕೊಳ್ಳುತ್ತಿವೆ. ಪ್ರಶ್ನೆ ಸೋರಿಕೆ ಜಾಲ ಅವುಗಳ ಹಿಂದಿರುವ ಶಂಕೆ ಇದೆ. ಈ ಬಗ್ಗೆಯೂ ಸಮಗ್ರ ತನಿಖೆ ಆಗಬೇಕು ಎಂದರು.

ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ, ಪ್ರಮುಖರಾದ ಕೀರ್ತನ ಗೌಡ, ಸಾಹಿಲ್, ಯು.ಟಿ.ಫರೀದ್ ಇಫ್ತಿಕರ್, ಸೋಹನ್, ಜೋಶ್ವಾ, ಸಂತೋಷ್ ಸುಳ್ಯ ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-29-778756803

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.