ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಆಡಳಿತದ ಎನ್ಎಂಪಿಎ ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ಬೇರೆ ಶಾಲೆಯ ಜೊತೆ ವಿಲೀನಗೊಳಿಸುವ ಪ್ರಸ್ತಾವ ಕೈಬಿಡಬೇಕು ಎಂದು ಮಾಜಿ ಶಾಸಕ ಬಿ.ಎ.ಮೊಹಿಯುದ್ದೀನ್ ಬಾವ ಒತ್ತಾಯಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ನವ ಮಂಗಳೂರು ಬಂದರಿಗಾಗಿ ಜಮೀನು ನೀಡಿದ್ದ ಕುಟುಂಬಗಳ ಮಕ್ಕಳಿಗೆ ಈ ಶಾಲೆಯು 40 ವರ್ಷಗಳಿಂದ ಶಿಕ್ಷಣ ನೀಡುತ್ತಿದೆ. ಕಾಟಿಪಳ್ಳ, ಕೃಷ್ಣಾಪುರ, ಹೊಸಬೆಟ್ಟು, ಸುರತ್ಕಲ್ ಹಾಗೂ ಚಿತ್ರಾಪುರದ ಬಹಳಷ್ಟು ಮಕ್ಕಳು ಈ ಶಾಲೆಯಲ್ಲಿ ಕಲಿತಿದ್ದಾರೆ. ಈ ಶಾಲೆಯನ್ನು ಬೇರೆ ಶಾಲೆ ಜೊತೆ ವಿಲೀನಗೊಳಿಸಿದರೆ ಹೋರಾಟ ನಡೆಸಬೇಕಾಗುತ್ತದೆ’ ಎಂದರು.

‘ಶಾಲಾ ಶೈಕ್ಷಣಿಕ ವರ್ಷದ ಚಟುವಟಿಕೆ ಶುರುವಾಗಿದೆ. ಆದರೆ, ಇನ್ನೂ ಒಂದನೇ ತರಗತಿಗೆ ಮಕ್ಕಳ ಪ್ರವೇಶ ಪ್ರಕ್ರಿಯೆ ಆರಂಭಿಸಿಲ್ಲ. ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿಗಳು ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಲು ಕ್ರಮವಹಿಸಬೇಕು. ಈಗಾಗಲೇ ಸ್ಥಗಿತಗೊಂಡ ಎಲ್ಕೆಜಿ ಮತ್ತು ಯುಕೆಜಿ. ತರಗತಿಗಳನ್ನು ಪುನರಾರಂಭಿಸಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-126-55664626

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.