ಮಂಗಳೂರು: ಸೌತ್ ಕೆನರಾ ಫಿಸಿಯೊಥೆರಫಿ ಟೀಚರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಭೌತ ಚಿಕಿತ್ಸೆಯ ಸಮ್ಮೇಳನ ‘ಮಂಗಳೂರು ಫಿಸಿಯೊಕಾನ್’ ನಗರದ ಟಿಎಂಎ ಪೈ ಸಭಾಭವನದಲ್ಲಿ ಏ.10 ಮತ್ತು 11ರಂದು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ಕೇರ್ ಕೌನ್ಸಿಲ್ ಅಧ್ಯಕ್ಷ ಡಾ. ಯು.ಟಿ. ಇಫ್ತಿಕಾರ್ ಫರೀದ್ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 10ರಂದು ಬೆಳಿಗ್ಗೆ 9ಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್.ಪಾಟೀಲ್ ಸಮ್ಮೇಳನ ಉದ್ಘಾಟಿಸುವರು. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುಖ್ಯ ಭಾಷಣ ಮಾಡುವರು ಎಂದರು.

ಪಿಲಿಫೈನ್ಸ್, ಮಸ್ಕತ್, ದುಬೈ ಸೇರಿದಂತೆ ದೇಶ ವಿದೇಶಗಳ ಪ್ರತಿನಿಧಿಗಳು, ಸ್ಥಳೀಯ ವಿದ್ಯಾರ್ಥಿಗಳು ಸೇರಿ 6 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಸಮ್ಮೇಳನದ ಭಾಗವಾಗಿ ರಕ್ತದಾನ ಶಿಬಿರ, ರೋಗಿಗಳಿಗೆ ಹಣ್ಣು ವಿತರಣೆ, ಸಾಂಸ್ಕೃತಿಕ ಸ್ಪರ್ಧೆ ಸೇರಿದಂತೆ ವಾರವಿಡೀ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಡಾ.ವಿಜಯ್ ಪಿ., ಡಾ. ಮೊಹಮ್ಮದ್ ಸುಹೈಲ್, ಡಾ.ವೈಶಾಲಿ ಶ್ರೀಜಿತ್, ಡಾ.ಭರತ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-29-806478817

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.