ಮಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎಫ್ಟಿಎಸ್ ಸಿ-2 (ಪೋಕ್ಸೊ) 20 ವರ್ಷಗಳ ಕಠಿಣ ಶಿಕ್ಷೆ ಮತ್ತು ₹40 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಪ್ರಕರಣ ದಾಖಲಾದ ಐದು ತಿಂಗಳಲ್ಲಿ ಅಪರಾಧಿಗೆ ಶಿಕ್ಷೆಯಾಗಿದೆ.

ದಯಾನಂದ ಮೂಲ್ಯ (44) ಶಿಕ್ಷೆಗೆ ಒಳಗಾದ ಅಪರಾಧಿ.

2025ರ ನವೆಂಬರ್ 16ರಂದು ಏಳು ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ, ದಯಾನಂದ ಮೂಲ್ಯ ಅಕ್ರಮ ಪ್ರವೇಶ ಮಾಡಿದ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ್ದ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಬಿ.ಎಸ್, ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶ ಮಾನು ಕೆ.ಎಸ್ ಅವರು, ಅಪರಾಧಿಗೆ ಮೇ 2ರಂದು ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲೆ ಸಹನಾದೇವಿ ಬೋಳೂರು ವಾದ ಮಂಡಿಸಿದ್ದರು.

ಕಾನೂನು ಸೇವಾ ಪ್ರಾಧಿಕಾರದಿಂದ ₹3.60 ಲಕ್ಷ ಹಾಗೂ ದಂಡದ ಮೊತ್ತ ಸೇರಿಸಿ, ಸಂತ್ರಸ್ತ ಬಾಲಕಿಗೆ ₹4 ಲಕ್ಷ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-29-1695415089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.