ಮಂಗಳವಾರ, ಸೆಪ್ಟೆಂಬರ್ 21, 2021
21 °C

ಮಂಗಳೂರು: ಆಂಬುಲೆನ್ಸ್‌ಗೆ ದಾರಿ ಬಿಡದ ಕಾರು ವಶಕ್ಕೆ, ಚಾಲಕನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಂಬುಲೆನ್ಸ್‌ಗೆ ದಾರಿ ಬಿಡದ ಕಾರು- ವಿಡಿಯೊ ಸ್ಕ್ರೀನ್‌ ಶಾಟ್‌

ಮಂಗಳೂರು: ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ರೋಗಿಯನ್ನು ಸಾಗಿಸುತ್ತಿದ್ದ ಆಂಬುಲೆನ್ಸ್​ಗೆ ದಾರಿ ಬಿಟ್ಟು ಕೊಡದ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ‌ ಪೊಲೀಸರು, ಕಾರು ವಶಕ್ಕೆ ಪಡೆದಿದ್ದಾರೆ.

ಸೋಮವಾರ ಸಂಜೆ ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ತುರ್ತುಚಿಕಿತ್ಸೆಗಾಗಿ ರೋಗಿಯನ್ನು ಆಂಬುಲೆನ್ಸ್‌ನಲ್ಲಿ ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ರಸ್ತೆಯಲ್ಲಿ ದಾರಿ ಬಿಡದೆ ಅಮಾನೀಯವಾಗಿ ವರ್ತಿಸಿ ಕಾರು ಚಾಲಕ ತೊಂದರೆ ನೀಡಿದ್ದಾನೆ.

ರಸ್ತೆಯಲ್ಲಿ ಇತರ ವಾಹನಗಳು ಬದಿಗೆ ಸರಿದು ಆಂಬುಲೆನ್ಸ್‌ಗೆ ದಾರಿ ಮಾಡಿ ಕೊಡುತ್ತಿದ್ದರೂ, ಕಾರಿನ ಚಾಲಕ ಅಡ್ಡಾದಿಡ್ದಿಯಾಗಿ ಚಲಿಸಿ, ಆಂಬುಲೆನ್ಸ್ ನ ಮುಂದೆ ಮತ್ತಷ್ಟು ವೇಗವಾಗಿ ಸಾಗಿದ್ದಾನೆ. ಇದೆಲ್ಲವೂ ಆಂಬುಲೆನ್ಸ್‌ನಲ್ಲಿ ಇದ್ದವರು ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ನೆಟ್ಟಿಗರು ಕಾರು ಚಾಲಕನ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ಮಂಗಳವಾರ ದಕ್ಷಿಣ ಸಂಚಾರ ಠಾಣೆ ಪೊಲೀಸರು, ಕಾರು ಸಮೇತ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು