ಮಂಗಳೂರು: ‘ಮೂಡುಬಿದಿರೆ ಠಾಣೆಯಲ್ಲಿ ಪೊಲೀಸ್ ಅಧಿಕಾರಿಯಾಗಿದ್ದ ವ್ಯಕ್ತಿ ವಿರುದ್ಧ ಅತ್ಯಾಚಾರ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದ್ದರೂ ಆತನನ್ನು ಇದುವರೆಗೆ ಬಂಧಿಸಿಲ್ಲವೇಕೆ. ಇಲ್ಲಿ ಪೊಲೀಸರಿಗೆ ಒಂದು ಕಾನೂನು ಹಾಗೂ ಸಾಮಾನ್ಯ ಜನರಿಗೆ ಒಂದು ಕಾನೂನು ಇದೆಯೇ’ ಎಂದು ಕಾರ್ಕಳದ ಸುಮತಿ ನಾಯ್ಕ್ ಪ್ರಶ್ನಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಸಾಮಾನ್ಯ ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾದ ತಕ್ಷಣವೇ ಅವರನ್ನು ಬಂಧಿಸುವ ಪೊಲೀಸ್ ಇಲಾಖೆ, ತಮ್ಮ ಇಲಾಖೆಯ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಮೀನ ಮೇಷ ಎಣಿಸುತ್ತಿರುವುದು ಏಕೆ. ಆರೋಪಿ ಅಧಿಕಾರಿ ಅಷ್ಟೊಂದು ಪ್ರಭಾವಿಯೇ? ಆತನ ಮೇಲೆ ಪ್ರಕರಣ ರದ್ದು ಪಡಿಸಲು ಹೈಕೋರ್ಟ್ ನಿರಾಕರಿಸಿದ್ದರೂ, ಜಿಲ್ಲೆಯಲ್ಲಿ ದಕ್ಷ ಅಧಿಕಾರಿಗಳು ಎಂದೆಣಿಸಿಕೊಂಡ ಉನ್ನತ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇರುವುದು ಅನುಮಾನ ಮೂಡಿಸಿದೆ’ ಎಂದರು.

‘ಅತ್ಯಾಚಾರ ಆರೋಪಿಯಾಗಿರುವ ಅಧಿಕಾರಿ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯ ಬಳಿ ಬೆಳೆದಿದ್ದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿಸಿ, ಮನೆಗೆ ಪೀಠೋಪಕರಣ ಮಾಡಿಸಿದ್ದಾನೆ. ಈ ಬಗ್ಗೆ ಅರಣ್ಯ ಇಲಾಖೆಗೆ ಪುರಾವೆ ಸಹಿತ ದೂರು ನೀಡಿದರೂ ಕ್ರಮ ಆಗಿಲ್ಲ’ ಎಂದು ಅವರು ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-29-282810400

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.