ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 10 ವರ್ಷಗಳಿಗಿಂತಲೂ ಹೆಚ್ಚು ಸಮಯದಿಂದ ಕರ್ತವ್ಯ ನಿರ್ವಹಿಸಿರುವ 63 ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ಗಳು ವರ್ಗಾವಣೆಗೊಂಡಿದ್ದಾರೆ. ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಕುಟುಂಬಸ್ಥರು ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ ಅವರನ್ನು ಕೋರಿದರು.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ನ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲು ನಗರಕ್ಕೆ ಮಂಗಳವಾರ ಭೇಟಿ ನೀಡಿದ್ದ ಸಲೀಂ ಅವರನ್ನು ಭೇಟಿಯಾಗಿ ಈ ಬಗ್ಗೆ ಅಹವಾಲು ಸಲ್ಲಿಸಿದರು.

ವರ್ಗಾವಣೆಗೊಂಡ ಕೆಲ ಪೊಲೀಸ್ ಸಿಬ್ಬಂದಿಯ ಕುಟುಂಬಸ್ಥರು ಸುದ್ದಿಗಾರರ ಜೊತೆ ಮಾತನಾಡಿ, ‘ನಮ್ಮ ಮನೆಯವರು ಉತ್ತರ ಕರ್ನಾಟಕ ಭಾಗದ ಜಿಲ್ಲೆಯವರು. ಇಲ್ಲಿ 10 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವರ್ಗಾವಣೆ ಆಗಿದ್ದರೂ, ಅವರನ್ನು ಇಲ್ಲಿನ ಕರ್ತವ್ಯದಿಂದ ಬಿಡುಗಡೆ ಮಾಡಿಲ್ಲ. ವಯಸ್ಸಾದ ಪೋಷಕರು ಊರಿನಲ್ಲಿ ಇದ್ದಾರೆ. ಮಕ್ಕಳನ್ನು ಅಲ್ಲಿ ಶಾಲೆಗೆ ಸೇರಿಸಬೇಕೇ ಬೇಡವೇ ಎಂಬ ಗೊಂದಲದಲ್ಲಿದ್ದೇವೆ. ನಮ್ಮ ಬೇಡಿಕೆ ಈಡೇರದಿ ದ್ದರೆ ಪಾದಯಾತ್ರೆ ಮೂಲಕ ತೆರಳಿ ಡಿಜಿಪಿ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ’ ಎಂದರು.

ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಲೀಂ, ‘ಇಲ್ಲಿನ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಒಂದು ವರ್ಷದಿಂದ ಇಲ್ಲಿನ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಇಲ್ಲಿ ಸಮಸ್ಯೆ ಏನಿಲ್ಲ. ಇದನ್ನು ಮುಂದುವರಿಸಿಕೊಂಡು ಹೋಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.

‘ಉತ್ತರ ಕರ್ನಾಟಕ ಭಾಗದ ಬಹಳ ಮಂದಿ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಇಲ್ಲಿ 10 ವರ್ಷ ಸೇವೆ ಸಲ್ಲಿಸಿದ ಬಳಿಕ ಒಂದು ಬಾರಿ ವರ್ಗಾವಣೆಗೆ ಹೊಂದಲು ಅವಕಾಶ ಇದೆ. ಪೊಲೀಸ್ ಸಿಬ್ಬಂದಿಯ ವರ್ಗಾವಣೆ ವಿಷಯದಲ್ಲಿ ಅವರ ಕುಟುಂಬದವರು ಮನವಿ ನೀಡಿದ್ದಾರೆ. ಶೇ 15ರ ಮಿತಿಗಿಂತ ಹೆಚ್ಚು ಖಾಲಿ ಹುದ್ದೆ ಉಳಿಯದಂತೆ ನೋಡಿಕೊಂಡು ವರ್ಗಾವಣೆಗೊಂಡವರನ್ನು ಹಂತ ಹಂತವಾಗಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಕೆಲ ಐಪಿಎಸ್ ಅಧಿಕಾರಿಗಳ ವಿರುದ್ಧ ಕೆಲ ಪೊಲೀಸ್ ಅಧಿಕಾರಿಗಳು ಮಾಡಿರುವ ಆರೋಪದ ಬಗೆಗಿನ ಪ್ರಶ್ನೆಗೆ ಸಲೀಂ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-29-1444304605

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.