ಮಂಗಳೂರು: ಸೂಟರ್ಪೇಟೆಯ ಪ್ರಜ್ವಲ್ ಯುವಕ ಮಂಡಲವು ಸಮಾಜಮುಖಿ ಚಟುವಟಿಕೆಗಳ ಜಿಲ್ಲೆಯ ಮಾದರಿ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ಸೂಟರ್ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದ ಬಬ್ಬುಸ್ವಾಮಿ ರಂಗಮಂದಿರದಲ್ಲಿ ನಡೆದ ಪ್ರಜ್ವಲ್ ಯುವಕ ಮಂಡಲದ 28ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸಂಘಟನೆಯು 28 ವರ್ಷಗಳಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯಂಥ ಸೇವಾ ಚಟುವಟಿಕೆಗಳ ಮೂಲಕ ಜನಮನ ಗೆದ್ದಿದೆ. ಇಂತಹ ಸಂಘಟನೆಗಳು ಯುವಜನತೆಗೆ ಪ್ರೇರಣೆಯಾಗಬೇಕು ಎಂದರು.

ಪ್ರಜ್ವಲ್ ಯುವಕ ಮಂಡಲದ ಗೌರವಾಧ್ಯಕ್ಷ ಬಾಬು ಪಿ. ಅಧ್ಯಕ್ಷತೆ ವಹಿಸಿದ್ದರು. ಸೂಟರ್ಪೇಟೆ ಶ್ರೀ ಕೋರ್ದಬ್ಬು ದೈವಸ್ಥಾನದ ಗುರಿಕಾರ ಎಸ್. ರಾಘವೇಂದ್ರ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಅಭಿಮತ ವಾಹಿನಿಯ ನಿರ್ದೇಶಕಿ ಮಮತಾ ಶೆಟ್ಟಿ, ನಿಕಟಪೂರ್ವ ಕಾರ್ಪೊರೇಟರ್ ಭರತ್ ಕುಮಾರ್, ಆರ್ಡಿಪಿಆರ್ ಇಲಾಖೆಯ ವಿಶ್ವನಾಥ್ ಉಳ್ಳಾಲ್ ಮುಖ್ಯ ಅತಿಥಿಗಳಾಗಿದ್ದರು.

ಎಸ್. ಜಗದೀಶ್ಚಂದ್ರ ಅಂಚನ್, ಅಧ್ಯಕ್ಷ ಅಭಿಲಾಷ್ ಭಾಗವಹಿಸಿದರು.

ಶ್ರದ್ದಾಂಜಲಿ: ಇತ್ತೀಚೆಗೆ ನಿಧನರಾದ ಪ್ರಜ್ವಲ್ ಯುವಕ ಮಂಡಲದ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಅವರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ಗೌರವ ಸಲಹೆಗಾರ ಎಸ್. ಜಗದೀಶ್ಚಂದ್ರ ಅಂಚನ್ ನುಡಿನಮನ ಸಲ್ಲಿಸಿದರು. ಕೆ.ಕೆ. ಪೇಜಾವರ ಸ್ವಾಗತಿಸಿದರು. ಸೃಜನ್ ಮಾನವ್ ವಂದಿಸಿದರು. ನಂತರ ಬೆನಕ ಆರ್ಟ್ಸ್ ಕುಡ್ಲ ತಂಡದಿಂದ ‘ಪೊರಿಪುದಪ್ಪೆ ಜಲದುರ್ಗೆ’ ಎಂಬ ನಾಟಕ ಪ್ರದರ್ಶನಗೊಂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-29-1028114832

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.