ಮಂಗಳೂರು: ಬಡವರಿಗೆ ಮನೆ ನಿರ್ಮಿಸಿಕೊಡುವುದು ಸೇರಿದಂತೆ ವಿವಿಧ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿರುವ ಬೆಳ್ತಂಗಡಿಯ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್.ಜಿ. ಅವರಿಗೆ 2026ನೇ ಸಾಲಿನ ‘ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಯನ್ನು ಭಾನುವಾರ ಇಲ್ಲಿ ಪ್ರದಾನ ಮಾಡಲಾಯಿತು.

ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪಾಯುಕ್ತ ಎಚ್.ಎನ್.ಮಿಥುನ್, ‘ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳಿಗೆ ಜಗತ್ತಿನ ಅರಿವು ಮೂಡಿಸಿದ್ದು ಪತ್ರಿಕೆಗಳು. ಸಾಮಾ ಜಿಕ ಮಾಧ್ಯಮಗಳು ಜನಪ್ರಿಯವಾಗಿರಬಹುದು ಆದರೆ ಪತ್ರಿಕೆಗಳಿಗೆ ಅವುಗಳದ್ದೇ ಆದ ಮಹತ್ವ ಇದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿದರು.

ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ ವೈ., ಹರ್ಷ, ರೇಮಂಡ್ ಡಿಕುನ್ಹ, ಆರ್.ಎಂ.ರಾಜೇಂದ್ರನ್ ಅವರನ್ನು ಗೌರವಿಸಲಾಯಿತು. ಮಾಧ್ಯಮ ಅಕಾಡೆಮಿ ವಿಶೇಷ ಪ್ರಶಸ್ತಿ ಪುರಸ್ಕೃತ ಆನಂದ ಶೆಟ್ಟಿ, ಕೆಯುಡಬ್ಲುಜೆ ಪ್ರಶಸ್ತಿ ಪುರಸ್ಕೃತರಾದ ರಾಮಕೃಷ್ಣ.ಆರ್., ರಾಜೇಶ್.ಶೆಟ್ಟಿ ದೋಟ, ಅಬ್ದುಲ್ ರಹಿಮಾನ್ .ಟಿ., ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸತೀಶ್ ಇರಾ, ರಾಜೇಶ್ ಶೆಟ್ಟಿ ದಡ್ಡಂಗಡಿ, ಎ.ಕೆ.ಕುಕ್ಕಿಲ, ಸುಳ್ಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಪ್ರಶಸ್ತಿ ಪುರಸ್ಕೃತ ಹರೀಶ್ ಮೋಟುಕಾನ ಅವರನ್ನು ಸನ್ಮಾನಿಸಲಾಯಿತು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಶಾಂತಾರಾಮ ಶೆಟ್ಟಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಶ್ರೀನಿವಾಸ ನಾಯಕ್ ಇಂದಾಜೆ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-29-1682711610

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.