ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರ್ಕಾರಿ ಆಸ್ಪತ್ರೆಗಳ ನಿರ್ವಹಣೆಯನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸಿ ಆರೋಗ್ಯ ಇಲಾಖೆಯ ಆದೇಶ ಹೊರಡಿಸಿರುವುದನ್ನು ಖಂಡಿಸಿ ಸಿಪಿಎಂ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಗುರುವಾರ ನಡೆಯಿತು.

ಖಾಸಗಿ ಆಸ್ಪತ್ರೆಗಳ ಲಾಬಿಗೆ ಸರ್ಕಾರ ಮಣಿದಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು. ಈ ಆದೇಶ ಹಿಂಪಡೆ ಯಬೇಕು ಎಂದು ಒತ್ತಾಯಿ ಸಿದರು. ಮೆರವಣಿಗೆ ಉದ್ದಕ್ಕೂ ಸರ್ಕಾರದ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ದ ಘೋಷಣೆ ಕೂಗಿದರು.

ಪ್ರತಿಭಟನ ಸಭೆಯನ್ನು ಉದ್ಘಾಟಿಸಿದ ಸಿಪಿಎಂ ಜಿಲ್ಲಾ ಸಮಿತಿ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ‘ಇಲ್ಲಿನ ಖಾಸಗಿ ಆಸ್ಪತ್ರೆಗಳಲ್ಲಿ ಅತ್ಯುತ್ತಮ ಚಿಕಿತ್ಸೆ ದೊರಕುತ್ತದೆ ಎಂದು ಜನಪ್ರತಿನಿಧಿಗಳು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಮುಖಂಡರು ಕೊಂಡಾಡುತ್ತಿದ್ದಾರೆ. ವಾಸ್ತವ ಬೇರೆಯೇ ಇದೆ. ಇಲ್ಲಿನ ಖಾಸಗಿ ಆಸ್ಪತ್ರೆಗಳ ಲಾಭಕೋರತನದಿಂದ ರೋಗಿಗಳು, ಅವರ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಚಿಕಿತ್ಸೆಗೂ ಪ್ಯಾಕೇಜ್ ವ್ಯವಸ್ಥೆ ಬಂದಿದೆ. ಮೃತದೇಹಗಳನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಹಣ ವಸೂಲಿ ಮಾಡಿದ ಉದಾಹರಣೆಗಳೂ ಜಿಲ್ಲೆಯಲ್ಲಿವೆ. ಚಿಕಿತ್ಸೆಯ ದುಬಾರಿ ವೆಚ್ಚ ಭರಿಸಲಾಗದೆ ಸಾಮಾಜಿಕ ಮಾಧ್ಯಮಗಳಲ್ಲಿ ದೇಣಿಗೆ ಸಂಗ್ರಹಿಸುವುದು ಇಲ್ಲಿ ಮಾಮೂಲಿ ಎಂಬಂತಾಗಿದೆ’ ಎಂದರು.

‘ಸರ್ಕಾರಿ ಆಸ್ಪತ್ರೆಗಳ ರೋಗಿಗಳು ಖಾಸಗಿ ವೈದ್ಯ ಕಾಲೇಜುಗಳ ಪಾಲಿಗೆ ವಿದ್ಯಾರ್ಥಿಗಳ ಕಲಿಕೆ ಸಾಮಗ್ರಿಗಳು ಅಷ್ಟೇ. ಖಾಸಗಿ ತೆಕ್ಕೆಗೆ ವಹಿಸಿದ ಬಳಿಕವೂ ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸೆಯ ಗುಣಮಟ್ಟ ಸುಧಾರಣೆಯಾಗದು. ಬಡ ಜನರಿಗೆ ಚಿಕಿತ್ಸೆ ಖಾತರಿ ಪಡಿಸಬೇಕಾದರೆ ಸರ್ಕಾರಿ ಆಸ್ಪತ್ರೆ ಬಲಪಡಿಸಬೇಕು. ಸಾರ್ವಜನಿಕ ಆರೋಗ್ಯ ಸೇವೆಯ ಖಾಸಗೀಕರಣ ನಿಲ್ಲಿಸದಿದ್ದರೆ ಅನಿರ್ದಿಷ್ಟಾವಧಿ ಧರಣಿ ಮೂಲಕ ಹೋರಾಟವನ್ನು ತೀವ್ರಗೊಳಿಸಲಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕರಿ ಬಾವುಟ ಪ್ರದರ್ಶಿಸಲಿದ್ದೇವೆ’ ಎಂದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್, ‘ಆಸ್ಪತ್ರೆಗಳ ಖಾಸಗೀಕರಣವನ್ನು ವಿರೋಧಪಕ್ಷವಾದ ಬಿಜೆಪಿ ಶಾಸಕರೂ ಪ್ರಶ್ನೆ ಮಾಡಿಲ್ಲ. ಅವರು ಖಾಸಗಿ ವೈದ್ಯ ಕಾಲೇಜು ಆಸ್ಪತ್ರೆಗಳ ಮಾಲೀಕರ ಪರವಾಗಿದ್ದಾರೆ. ಈ ವಿಚಾರದ ಕುರಿತು ಅವರ ಮೌನವೇ ಇದಕ್ಕೆ ಸಾಕ್ಷಿ’ ಎಂದರು.

ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ ಯಾದವ ಶೆಟ್ಟಿ ಅಧ್ಯಕ್ಷತೆ ವಹಿ ಸಿದ್ದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಬಿ.ಎಂ.ಭಟ್, ಕೃಷ್ಣಪ್ಪ ಕೊಂಚಾಡಿ, ವಸಂತ ಆಚಾರಿ, ಜಯಂತಿ ಶೆಟ್ಟಿ, ಸುಕುಮಾರ್ ತೊಕ್ಕೊಟ್ಟು ಭಾಗವಹಿಸಿದ್ದರು. ಜಿಲ್ಲಾ ಸಮಿತಿ ಸದಸ್ಯ ಮನೋಜ್ ವಾಮಂಜೂರು ನಿರೂಪಿಸಿ ದರು, ಸದಾಶಿವ ದಾಸ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-29-440322936

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.