ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃತಕ ನೆರೆಯ ನೀರಿಗಿಳಿದು ದುರಸ್ತಿ: ಮೆಸ್ಕಾಂ ಸಿಬ್ಬಂದಿಗೆ ಸಾರ್ವಜನಿಕರ ಮೆಚ್ಚುಗೆ

Published 5 ಜುಲೈ 2023, 7:20 IST
Last Updated 5 ಜುಲೈ 2023, 7:20 IST
ಅಕ್ಷರ ಗಾತ್ರ

ಉಳ್ಳಾಲ (ದಕ್ಷಿಣ ಕನ್ನಡ): ಮೆಸ್ಕಾಂನ ಉಳ್ಳಾಲ-2 ಘಟಕದ ಪವರ್ ಮೆನ್ ವಸಂತ್ ಹಾಗೂ ಸುರೇಶ್ ಗದ್ದೆಯೊಂದರಲ್ಲಿ ಸೃಷ್ಟಿಯಾಗಿದ್ದ ಕೃತಕ ನೆರೆಯ ನಡುವೆ ಸಾಗಿ, 40 ಮನೆಗಳಿಗೆ ವಿದ್ಯುತ್ ಪೂರೈಸಿದ್ದಾರೆ. ಈ ಕುರಿತ ವಿಡಿಯೊವನ್ನು ಮೆಸ್ಕಾಂ ಜೆ.ಇ. ನಿತೇಶ್ ಹೊಸಗದ್ದೆ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತಮ್ಮ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಳ್ಮ ಗ್ರಾಮದ ಬೆರಿಕೆ ಎಂಬಲ್ಲಿ ಬಿರುಗಾಳಿ, ಮಳೆಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ, 40 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಬಗ್ಗೆ ಸ್ಥಳೀಯರು ಮೆಸ್ಕಾಂಗೆ ದೂರು ನೀಡಿದ್ದರು.

ಸ್ಥಳಕ್ಕೆ ಮೆಸ್ಕಾಂನ ಪವರ್ ಮೆನ್ ವಸಂತ್ ಹಾಗೂ ಸುರೇಶ್ ಭೇಟಿ ನೀಡಿದ್ದಾರೆ. ಆದರೆ ಟ್ರಿಪ್ ಆಗಿದ್ದ ವಿದ್ಯುತ್ ಕಂಬವು ನೆರೆ ನೀರಿನಿಂದ ಆವೃತಗೊಂಡಿತ್ತು. ಗದ್ದೆಯಲ್ಲಿರುವ ನೆರೆ ನೀರನ್ನು ಲೆಕ್ಕಿಸದ ಸಿಬ್ಬಂದಿ ಸ್ಥಳೀಯರೊಬ್ಬರ ಮಾರ್ಗದರ್ಶನದಿಂದ ನೀರಿಗೆ ಇಳಿದು ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿ ಸ್ಥಳೀಯರ ಪ್ರಶಂಸೆಗೆ ಪಾತ್ರರಾಗಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT