ಮಂಗಳೂರು: ಮೇರುನಟ ರಾಜ್ ಕುಮಾರ್ ಅವರ 97ನೇ ಜನ್ಮದಿನದ ಅಂಗವಾಗಿ ‘ಡಾ. ರಾಜ್ ಸವಿನೆನಪು ಸಂಗೀತ ಸುಧೆ ಸೀಸನ್ –1’ ಕಾರ್ಯಕ್ರಮವು ಮೇ 10ರಂದು ಸಂಜೆ 5ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಡಾ. ರಾಜ್ಕುಮಾರ್ ಅಭಿಮಾನಿಗಳ ವೇದಿಕೆ, ಕರಾವಳಿ ಕನ್ನಡಿಗರ ಬಳಗದ ಅಧ್ಯಕ್ಷ ನಾಗೇಂದ್ರ ಎನ್. ಶನಿವಾರ ಇಲ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಲೇಡಿಹಿಲ್ನ ಎಸ್.ಎಲ್. ಶೇಟ್ ಡೈಮಂಡ್ ಹೌಸ್ ಅರ್ಪಿಸುವ ಕಾರ್ಯಕ್ರಮದಲ್ಲಿ ಹಿರಿಯ ಅಶಕ್ತ ಕಲಾ ಸಾಧಕರಿಗೆ ಸನ್ಮಾನ ಹಾಗೂ ಆರ್ಥಿಕ ನೆರವು ನೀಡಲಾಗುವುದು. ಗಾಯಕರು ರಾಜ್ಕುಮಾರ್ ಅವರ ಜನಪ್ರಿಯ ಹಾಡುಗಳನ್ನು ಹಾಡಲಿದ್ದಾರೆ ಎಂದರು

ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ, ಎಸ್.ಎಲ್. ಶೇಟ್ ಡೈಮಂಡ್ ಹೌಸ್ ಮಾಲೀಕ ರವೀಂದ್ರ ಎಲ್. ಶೇಟ್, ಚಲನಚಿತ್ರ ನಿರ್ಮಾಪಕ ಎಸ್.ಎ. ಚಿನ್ನೇಗೌಡ, ನಿರ್ಮಾಪಕ ವಿಶ್ವನಾಥ್, ದೊಡ್ಮನೆ ಅಪ್ಪು ಯುವಸೇನೆ ಮಂಗಳೂರು ಅಧ್ಯಕ್ಷ ಕೆ.ಆರ್. ಜನಾರ್ದನ್ ಬಾಬು, ರಂಗಭೂಮಿ ಕಲಾವಿದೆ ಸುಮತಿಶ್ರೀ ಭಾಗವಹಿಸುವರು ಎಂದರು.

ವೇದಿಕೆ ಕಾರ್ಯದರ್ಶಿ ಕದ್ರಿ ಮನೋಹರ್, ರವೀಂದ್ರ ಎಲ್. ಶೇಟ್, ಶರತ್ ಶೇಟ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-29-293645247

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.