ಮಂಗಳೂರು: ಇಲ್ಲಿನ ಎರಡನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ನ್ಯಾಯಾಲಯದ ವಿಚಾರಣೆಯಲ್ಲಿ ಖುಲಾಸೆಗೊಂಡಿದ್ದ ವ್ಯಕ್ತಿಯ ಮೇಲಿನ ಸುಲಿಗೆ ಆರೋಪ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತ್ವರಿತಗತಿ ವಿಶೇಷ ನ್ಯಾಯಾಲಯ –1ರ ವಿಚಾರಣೆ ವೇಳೆ ಸಾಬೀತಾಗಿದೆ. ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತ್ವರಿತಗತಿ ವಿಶೇಷ ನ್ಯಾಯಾಲಯ –1 ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿ ಆದೇಶ ಮಾಡಿದೆ.

ಶಿವಮೊಗ್ಗ ಜಿಲ್ಲೆಯ ಆರ್.ಎಂ.ಎಲ್ ನಗರದ ಶಿವಕುಮಾರ್ ( 38 ವರ್ಷ) ಶಿಕ್ಷೆಗೆ ಒಳಗಾದ ಅಪರಾಧಿ. ಆತ 2017ರ ಜೂನ್ 26ರಂದು ನಗರದ ಫುಟ್ಬಾಲ್ ಮೈದಾನದ ಪೆವಿಲಿಯನ್ ಕಟ್ಟಡದ ಬಳಿಯ ಕಾಲುದಾರಿ ಲೋಕೇಶ್ ಎಂಬುವರ ವಿವೊ ಮೊಬೈಲ್ ಫೋನನ್ನು ಶಿವಕುಮಾರ್ ಹಾಗೂ ಲೋಕೇಶ್ ಕುತ್ತಿಗೆಯಲ್ಲಿದ್ದ ಸುಮಾರು 10 ಗ್ರಾಮ್ ತೂಕದ ಚಿನ್ನದ ಸರವನ್ನು ಇನ್ನೊಬ್ಬ ಆರೋಪಿ ಮುತ್ತುಮ್ ಸುಲಿಗೆ ಮಾಡಿದ್ದರು. ಈ ಬಗ್ಗೆ ನಗರ ದಕ್ಷಿಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಎರಡನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಧೀಶರ ಮತ್ತು ಸಿ.ಜೆ.ಎಂ ನ್ಯಾಯಾಲಯ ಆರೋಪಿಯನ್ನು ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಮೇಲ್ಮನವಿ ಸಲ್ಲಿಸಿತ್ತು.

‘ಶಿವಕುಮಾರ್ ವಿರುದ್ಧದ ಆರೋಪ ಸಾಬೀತಾಗಿತ್ತು. ಹಾಗಾಗಿ ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತ್ವರಿತಗತಿ ವಿಶೇಷ ನ್ಯಾಯಾಲಯ –1ರ ನ್ಯಾಯಾಧೀಶರಾದ ಮೋಹನ ಜೆ.ಎಸ್. ಅವರು ಶಿವಕುಮಾರ್ಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 392ರ (ಸುಲಿಗೆ) ಪ್ರಕಾರ ₹ 50 ಸಾವಿರ ದಂಡ ಮತ್ತು ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಪ್ರಕರಣದ ಇನ್ನೊಬ್ಬ ಆರೋಪಿ ಮುತ್ತುಮ್ ಮೃತಪಟ್ಟಿದ್ದಾನೆ ಎಂದು ಮೇಲ್ಮನವಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದ ಸರ್ಕಾರಿ ವಕೀಲ ಕೆ.ಬದರಿನಾಥ ನಾಯರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-29-787672076

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.