ಮಂಗಳೂರು: ಉಳ್ಳಾಲ ಜುಮ್ಮಾ ಮಸೀದಿ ಮತ್ತು ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಸಮಿತಿ ವತಿಯಿಂದ ನಿರ್ಮಾಣವಾಗಿರುವ ಸಯ್ಯಿದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್ ಕಟ್ಟಡದ ಉದ್ಘಾಟನೆಯು ಮೇ 1ರಂದು ಸಂಜೆ 4.30ಕ್ಕೆ ನಡೆಯಲಿದೆ ಎಂದು ದರ್ಗಾ ಸಮಿತಿ ಅಧ್ಯಕ್ಷ ಬಿ.ಜಿ. ಹನೀಫ್ ಬುಧವಾರ ಇಲ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘25 ಸಾವಿರ ಚದರ ಅಡಿ ವಿರ್ಸ್ತೀಣದಲ್ಲಿ ₹5 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಿಸಲಾಗಿದೆ. ಇದಕ್ಕೆ ಸರ್ಕಾರದಿಂದ ₹2 ಕೋಟಿ ಅನುದಾನ ದೊರೆತಿದೆ. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಉದ್ಘಾಟಿಸುವರು. ಅತಿಥಿಗಳಾಗಿ ಕುಂಬೋಲ್ ಸಯ್ಯಿದ್ ಆಟಕ್ಕೋಯ ತಂಙಳ್, ಸಯ್ಯಿದ್ ಅಶ್ರಫ್ ತಂಙಳ್ ಆದೂರು, ಮರ್ಕಝ್ ನಿರ್ದೇಶಕ ಅಬ್ದುಲ್ ಹಕೀಂ ಅಝ್ಹರಿ, ಸ್ಪೀಕರ್ ಯು.ಟಿ.ಖಾದರ್ ಭಾಗವಹಿಸುವರು’ ಎಂದರು.

2025–26ನೇ ಸಾಲಿನಲ್ಲಿ ಮದನಿ ಬಿರುದು ಪಡೆದ ವಿದ್ಯಾರ್ಥಿಗಳಿಗೆ ಸನದು ದಾನ ಮಾಡಲಾಗುವುದು. ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅವಕಾಶವಿದೆ ಎಂದು ಹೇಳಿದರು.

ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ, ಅಶ್ರಫ್ ಅಹ್ಮದ್ ರೈಟ್ವೇ, ನಾಝಿಮ್ ರಹ್ಮಾನ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-29-1536189144

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.